ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದು ಐದನೇ ಬಾರಿಗೆ ಮದ್ಯದ ದರ ಏರಿಕೆಯಾಗುವ ಸಾಧ್ಯತೆಯಿದೆ. ಮೇ 1 ರಿಂದ ಜಾರಿಗೆ ಬರಲಿರುವ ಹೊಸ ಅಬಕಾರಿ ನೀತಿಯಂತೆ, ಮದ್ಯದಲ್ಲಿರುವ ಆಲೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತದೆ.
ಇದರಿಂದಾಗಿ ಸಾಮಾನ್ಯ ಜನರು ಬಳಸುವ ಮದ್ಯದ ಬೆಲೆ ಶೇ. 20ರಷ್ಟು ಏರಿಕೆಯಾಗಲಿದ್ದು, ಮಧ್ಯಮ ಮತ್ತು ಕೆಳವರ್ಗದ ಮದ್ಯಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ. ವಿಸ್ಕಿ, ರಮ್, ಬ್ರಾಂಡಿ, ಜಿನ್ ಬೆಲೆಗಳು ಕ್ವಾರ್ಟ‌್ರಗೆ 15-25 ರೂ. ಹೆಚ್ಚಾಗುವ ಅಂದಾಜಿದೆ.














































