ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ ಸಾವು,ಸಹಸವಾರೆ ವಿದ್ಯಾರ್ಥಿನಿ ಗಂಭೀರ

ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿ ಬೈಕ್‌ ಸವಾರ ಮೃತಪಟ್ಟು ಸಹಸವಾರೆ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಏಪ್ರಿಲ್ 29ರಂದು ಸಂಜೆ ನಡೆದಿದೆ.
ಮೃತರನ್ನು ನೆಡ್ಡಿಲ್ ನಿವಾಸಿ ಶಿವಕುಮಾ‌ರ್ ಅವರ ಪುತ್ರ ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿ ಕಾರ್ತಿಕ್ (24) ಎಂದು ಗುರುತಿಸಲಾಗಿದೆ. ಸಹಸವಾರೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಎಲಿಯ ನಿವಾಸಿ, ಅದೇ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿನಿ ನೇಹಾ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.































































































Leave a Comment

Your email address will not be published. Required fields are marked *

error: Content is protected !!
Scroll to Top