ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಸಿಡಿಲು ಹಾಗೂ 50 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಬಾಗಲಕೋಟೆ, ಬೆಳಗಾವಿ ಮತ್ತು ಗದಗ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಮೇ 2 ರವರೆಗೆ ಪೂರ್ವ ಮುಂಗಾರು ಮಳೆ ಮುಂದುವರಿಯಲಿದ್ದು, ಸಾರ್ವಜನಿಕರು ಹಾಗೂ ರೈತರು ಸಿಡಿಲಿನ ಸಂದರ್ಭದಲ್ಲಿ ಮರಗಳ ಕೆಳಗೆ ನಿಲ್ಲದೆ ಸುರಕ್ಷಿತವಾಗಿರುವಂತೆ ಮತ್ತು ಬೆಳೆಗಳನ್ನು ರಕ್ಷಿಸಿಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.
ಕರ್ನಾಟಕದಲ್ಲಿ ಭಾರೀ ಗಾಳಿ ಮಳೆ ಮುನ್ಸೂಚನೆ,17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಣೆ



















































