ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ಮೇ 6ರಿಂದ 12ರವರೆಗೆ ಮಳೆಯ ಮುನ್ಸೂಚನೆ ನೀಡಿದೆ. ಉತ್ತರ ತೆಲಂಗಾಣದಿಂದ ಮನ್ನಾರ್ ಕೊಲ್ಲಿವರೆಗೆ ಉಂಟಾದ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆ ವಾತಾವರಣ ನಿರ್ಮಾಣವಾಗಿದೆ. ಮೇ 7 ಮತ್ತು 8ರಂದು ಹಾಸನ, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್!





















































