ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ
ಪವನ್ ಕ್ಯಾಂಟೀನ್’ ಮೇಲೆ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆ ಹಚ್ಚಿ ಯುವತಿಯೊಬ್ಬರನ್ನು ರಕ್ಷಿಸಿ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕ್ಯಾಂಟೀನ್ ಮಾಲಕ ಸುಂದರ್ ಶೆಟ್ಟಿ ಹಾಗೂ ಗಿರಾಕಿಗಳಾದ ಉಸ್ಮಾನ್, ಹೈದರ್ ಎಂಬವರನ್ನು ಬಂಧಿಸಲಾಗಿದೆ.
ಪವನ್ ಕ್ಯಾಂಟೀನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದಾಗ ವೇಶ್ಯಾವಾಟಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. 29 ವರ್ಷದ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿ, 5 ಸಾವಿರ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ, ಪೊಲೀಸ್ ದಾಳಿ,ಮೂವರ ಮೇಲೆ ಪ್ರಕರಣ ದಾಖಲು





















































