ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಭಜನೆ ಸಲಭದ ಮಾರ್ಗ ಎಂದು ಸುಳ್ಯ ಚೆನ್ನಕೇಶವ ದೇವಳದ ಅನುವಂಶಿಕ ಮೊಕ್ತೇಸರ ಡಾ. ಡಾ.ಹರಪ್ರಸಾದ್ ತುದಿಯಡ್ಕ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸುಳ್ಯ ,ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯ ಸಭಾಂಗಣದಲ್ಲಿ ಒಂದು ವಾರಗಳ ಕಾಲ ನಡೆದ ಭಜನಾ ತರಬೇತಿ ಹಾಗೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.
ಅಧುನಿಕ ಕಾಲದಲ್ಲಿ ಎಲ್ಲರೂ ಇಂಗ್ಲೀಷ್ ವ್ಯಾಮೋಹಕ್ಕೆ ಒಳಗಾಗಿ ಹೆತ್ತವರು ತಮ್ಮ ಮಕ್ಕಳನ್ನು ಆಂಗ್ಲಮಾದ್ಯಮ ಶಾಲೆಗೆ ಕಳುಹಿಸುತ್ತಿದ್ದರೂ ಭಜನೆಯ ಮೇಲೆ ಒಲವು ತೋರಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಭಜನೆ ಸೇರಿದಂತೆ ನಮ್ಮ ಹಿರಿಯರಿಂದ ಬಂದಿರುವ ಸಂಸ್ಕೃತಿಗಳನ್ನು ಉಳಿಸಿ ಬೆಳೆಸಲು ಮಕ್ಕಳು ಹಾಗೂ ಹೆತ್ತವರು ಶ್ರಮಿಸಬೇಕು.ಭಜನಾ ಪರಿಷತ್ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಇಂತಹ ಶಿಬಿರ ನಡೆಯುತ್ತಿರುವುದು ಶ್ರೇಷ್ಠ ಕೆಲಸ ಎಂದು ಅವರು ಹೇಳಿದರು.
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ನ ಸುಳ್ಯ ವಲಯದ ಅಧ್ಯಕ್ಷೆ ಸವಿತಾ ಸಂದೇಶ್ ಅಧ್ಯಕ್ಷತೆ ವಹಿಸಿದ್ದರು.
ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ ರಾಮಚಂದ್ರ, ಕಾಯರತೋಡಿ ಮಹಾವಿಷ್ಣು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೆಂಕಪ್ಪ ಗೌಡ,ಉದ್ಯಮಿಗಳಾದ ನಾರಾಯಣ ಕೇಕಡ್ಕ,ಅಶೋಕ ಪ್ರಭು,ಜಗದೀಶ ಸರಳಿಕುಂಜ,ಬಾಲಚಂದ್ರ ಹರ್ಲಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯೋಜನಾಧಿಕಾರಿ ಮಾದವ ಗೌಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಮೇಲ್ವಿಚಾರಕ ದಿನೇಶ್ ವಂದಿಸಿದರು.ಶಿಬಿರಾರ್ಥಿಗಳು ಹೆತ್ತವರು ಪಾದ ಪೂಜೆ ಮಾಡಿದರು.
ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಭಜನೆ ಸಲಭದ ಮಾರ್ಗ : ಡಾ.ಹರಪ್ರಸಾದ್ ತುದಿಯಡ್ಕ





















































