ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಮತ್ತು ಚಂದನ ಯುವತಿ ಮಂಡಲ ಅಡ್ತಲೆ ಇವರ ವತಿಯಿಂದ ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಇವರ ಆಶ್ರಯದಲ್ಲಿ ಪಂಚಸಪ್ತತಿ ಸ್ವಚ್ಚತಾ ಅಭಿಯಾನದ ಸ್ವಚ್ಚ ಅಂಗಡಿ ಪ್ರಶಸ್ತಿ ಪ್ರದಾನ,ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ NIMA (R) ಸುಳ್ಯ ಇವರ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಭಾರತೀಯ ಅಂಚೆ ಇಲಾಖೆಯ ಸಹಕಾರದೊಂದಿಗೆ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ಕಾರ್ಯಕ್ರಮವು ಅರಂತೋಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ದಿನಾಂಕ 24.05.2026 ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9.00 ರಿಂದ ನಡೆಯಲಿದೆ. ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 24 ರಂದು ಅರಂತೋಡಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆಧಾರ್ ನೋಂದಣಿ& ತಿದ್ದುಪಡಿ ಶಿಬಿರ ಮತ್ತು ಸ್ವಚ್ಚ ಅಂಗಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ






















































