ಈ ವರ್ಷ ನೈಋತ್ಯ ಮುಂಗಾರು ಮಾರುತಗಳು (Monsoon) ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಅಂದರೆ ಮೇ 26 ರ ಸುಮಾರಿಗೆ ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸದ್ಯ ಆಗ್ನೇಯ ಅರಬ್ಬಿ ಸಮುದ್ರ, ಕೊಮೊರಿನ್ ಪ್ರದೇಶ, ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರ ಭಾಗಗಳಲ್ಲಿ ಮುಂಗಾರು ಮುನ್ನಡೆಯಲು ಪೂರಕ ವಾತಾವರಣ ಸೃಷ್ಟಿಯಾಗಿದೆ. ಬಂಗಾಳ ಕೊಲ್ಲಿಯಿಂದ ತಮಿಳುನಾಡಿನವರೆಗೆ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಚುರುಕಾಗಿದೆ. ಕರ್ನಾಟಕ, ಕೇರಳ ಮತ್ತು ಗುಜರಾತ್ ರಾಜ್ಯಗಳ ಹಲವು ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಕೇರಳದಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇಲಾಖೆಯು ಕರಾವಳಿ ತೀರದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಿದೆ.
ಮೇ.26ಕ್ಕೆ ಮುಂಗಾರು ಮಾರುತ ಕೇರಳ ಪ್ರವೇಶ






















































