ಮಾಣಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 25ರಂದು ನಡೆದಿದೆ.
ಸುಳ್ಯ ಗಾಂಧಿನಗರ ನಿವಾಸಿ ಮೊಹಿದೀನ್ ಅವರ ಪುತ್ರ ಖಲಂದರ್ ಷಾ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.
ಖಲಂದರ್ ಷಾ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೀನಿನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು.ಸ್ಕೂಟಿ ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ತಕ್ಷಣ ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆ ವೇಳೆಗೆ ಅವರು ಮೃತಪಟ್ಟಿದ್ದರೆನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುಳ್ಯದ ವ್ಯಕ್ತಿ ಅಪಘಾತದಲ್ಲಿ ಸಾವು























































