ಜೂನ್ 3ರಂದು ಸಂಜೆ 4.05ಕ್ಕೆ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇಂದು ಮಧ್ಯಾಹ್ನದ ನಂತರ ಬೆಂಗಳೂರಿನ ಕೆಲವು ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಮೂರು ಪ್ರಮುಖ ಆಡಳಿತಾತ್ಮಕ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ರಜೆ ನೀಡುವುದು ಅನಿವಾರ್ಯ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ರಜೆ ಸಚಿವಾಲಯದ ಸಿಬ್ಬಂದಿಗೆ ಮಾತ್ರವಲ್ಲದೆ, ಆಯಾ ಕಟ್ಟಡಗಳಲ್ಲಿ ನಿಯೋಜನೆಗೊಂಡಿರುವ ಎಲ್ಲಾ ಹಂತದ ನೌಕರರಿಗೂ ಅನ್ವಯಿಸಲಿದೆ.
ಇಂದು ಡಿಕೆ ಶಿವಕುಮಾರ್ ಪ್ರಮಾಣವಚನ: ಅರ್ಧ ದಿನ ರಜೆ ಘೋಷಣೆ
























































