ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಡಿ.ಕೆ ಶಿವಕುಮಾರ್ ಈ ದಿನ ಅಧಿಕಾರ ಸ್ವೀಕರಿಸುವ ಸಲುವಾಗಿ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವ್ಯವಸ್ಥಾಪನಾ ಸಮಿತಿ ವತಿಯಿಂದ ವಿಶೇಷ ಪೂಜೆ ನೆರವೇರಿಸಲಾಯಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸತ್ಯನಾರಾಯಣ ಭಟ್, ಕಾಯಂಬಾಡಿ ಸಂತೋಷ್ ಕುಮಾರ್ ರೈ ಪಲ್ಲತ್ತಡ್ಕ, ಧರ್ಮಣ್ಣ ನಾಯ್ಕ ಗರಡಿ,ಧರ್ಮಪಾಲ ಗೌಡ ಮರಕ್ಕಡ, ಮಾಯಿಲಪ್ಪ ಗೌಡ ಎಣ್ಣೂರು, ಶ್ರೀಮತಿ ಪವಿತ್ರ ಮಲ್ಲೆಟ್ಟಿ,ಶ್ರೀಮತಿ ಮಾಲಿನಿ ಕುದ್ವ, ಭಕ್ತಾದಿಗಳು ಉಪಸ್ಥಿತರಿದ್ದರು.

























































