ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದ ಆಸ್ತಿ ವಿವಾದ ಸಂಬಂಧಿತ ಆರು ಜನರ ಭೀಕರ ಕೊಲೆ ಪ್ರಕರಣದಲ್ಲಿ, ಪೊಲೀಸರು ಪ್ರಮುಖ ಸೂತ್ರಧಾರಿ ಹಾಗೂ ಮುಖ್ಯ ಆರೋಪಿ ಸೇರಿದಂತೆ ಮತ್ತಿಬ್ಬರನ್ನು ಗುರುವಾರ ಬಂಧಿಸಿದ್ದಾರೆ. ಈ ಬಂಧನಗಳೊಂದಿಗೆ ಒಟ್ಟು ಹದಿನೇಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ಮೇ 29ರಂದು ನಡೆದಿದ್ದ ಈ ಪ್ರಕರಣದ ತನಿಖೆ ತೀವ್ರಗೊಂಡಿದೆ.
ಆರು ಜನರ ಮರ್ಡರ್ ಪ್ರಕರಣ, ಪ್ರಮುಖ ಆರೋಪಿ ಸೇರಿ ಹಲವರ ಬಂಧನ!

























































