ಕೊಡಗು ಜಿಲ್ಲೆಯ ತಿತಿಮತಿ ಬಳಿಯ ಕೋಣನಕಟ್ಟೆಯಲ್ಲಿ ಕಾಫಿ ತೋಟ ವೀಕ್ಷಿಸಲು ಹೋಗಿದ್ದಾಗ
ನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (60) ಕಾಡಾನೆ ದಾಳಿಯಿಂದ ಸಾವನ್ಜಪ್ಪಿದ ಘಟನೆ ವರದಿಯಾಗಿದೆ.
ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಏಕಾಏಕಿ ದಾಳಿ ನಡೆಸಿದೆ.
ಆನೆ ದಾಳಿಯಿಂದ ಓಡಿ ಹೋಗಿ ಇಬ್ಬರು ಕಾಫಿ ತೋಟದ ಕಾರ್ಮಿಕರು ಜೀವ ಉಳಿಸಿಕೊಂಡಿದ್ದಾರೆ.
ಚಿಕಿತ್ಸೆಗಾಗಿ ಗೋಣಿಕೊಪ್ಪಲು ಲೋಪಾಮುದ್ರಾ ಆಸ್ಪತ್ರೆಗೆ ರವಾನೆ ವೇಳೆ ಸಂಧ್ಯಾ ಅವರು ಮೃತಪಟ್ಟಿದ್ದಾರೆ.
ಗಾಯಾಳು ಕಾರ್ಮಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊಡಗು : ಭೀಕರ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು!

























































