ಗೀಸರ್ ನ ಗ್ಯಾಸ್ ಸೋರಿಕೆಯಾಗಿ ಮಹಿಳೆ ಸಾವು











































































































ಸೋಮವಾರಪೇಟೆಯ ಹೋಂಸ್ಟೇ ಒಂದರಲ್ಲಿ ಜೂ 7ರಂದು ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರು ಮೂಲದ ಮಹಿಳೆ ಮೃತಪಟ್ಟ ಘಟನೆ ವರದಿಯಾಗಿದೆ.

 ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನೂತ(27) ಮೃತ ದುರ್ದೈವಿ.

ಕೊಡಗಿಗೆ ಪ್ರವಾಸ ಬಂದಿದ್ದ ಈಕೆ ಸೋಮವಾರಪೇಟೆಯ ಚೌಡ್ಲು ಗ್ರಾಮದ ಹೋಂಸ್ಟೆ ಅಲ್ಲಿ ಉಳಿದುಕೊಂಡಿದ್ದರು.
ಬೆಳಿಗ್ಗೆ ಸ್ನಾನ ಮಾಡಲು ಬಾತ್ ರೂಮಿಗೆ ತೆರಳಿದ್ದ ಸಂದರ್ಭದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾಳೆ.
ಬಾತ್ ರೂಮಿನಲ್ಲಿ ಕಿಟಕಿ ಇರಲಿಲ್ಲವೆಂದು ಹೇಳಲಾಗಿದೆ.
ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Leave a Comment

Your email address will not be published. Required fields are marked *

error: Content is protected !!
Scroll to Top