ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಸಮೀಪದ ಬ್ರಹತ್ ಗಾತ್ರದ ಅಪಾಯಕಾರಿ ಮರ ತೆರವು

ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಸಮೀಪ ಜಾಲ್ಸೂರು–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿದ್ದ ಬೃಹತ್ ಗಾತ್ರದ ಅಪಾಯಕಾರಿ ಮರವನ್ನು ಅಧಿಕಾರಿಗಳ ಅನುಮತಿಯೊಂದಿಗೆ ತೆರವುಗೊಳಿಸಲಾಗಿದೆ.
ಈ ಕುರಿತು ಕಳೆದ ಎರಡು ವರ್ಷಗಳಿಂದ ಸತ್ಯಶಾಂತಿತ್ಯಾಗಮೂರ್ತಿ ಸೋಣಂಗೇರಿಯವರು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಪತ್ರವ್ಯವಹಾರ ನಡೆಸಿ. ಸ್ಥಳ ಪರಿಶೀಲನೆ ನಡೆಸುವಂತೆ ಮನವಿ ಮಾಡುತ್ತಿದ್ದರು. ಮನವಿಗೆ ಕೂಡಲೇ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಮರವನ್ನು ಅಪಾಯಕಾರಿ ಎಂದು ಗುರುತಿಸಿ ಅದನ್ನು ತೆರವುಗೊಳಿಸಲು ಅಧಿಕೃತ ಆದೇಶ ನೀಡಿದ್ದರು.
ಮರದ ಕೆಳಭಾಗದಲ್ಲಿ ವಿದ್ಯುತ್ ತಂತಿಗಳು ಹಾದು ಹೋಗುತ್ತಿದ್ದು, ಪ್ರತಿದಿನ ನೂರಾರು ವಾಹನಗಳು ಹಾಗೂ ಪಾದಚಾರಿಗಳು ಈ ರಾಜ್ಯ ಹೆದ್ದಾರಿಯನ್ನು ಬಳಸುತ್ತಿರುವ ಕಾರಣ, ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಶನಿವಾರ ಮೆಸ್ಕಾಂ ಇಲಾಖೆ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು, ಬೃಹತ್ ಗಾತ್ರದ ಮರವನ್ನು ತೆರವುಗೊಳಿಸಲಾಯಿತು.
ಈ ಕ್ರಮದಿಂದ ಸಂಭವನೀಯ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣ ಕ್ರಮ ಕೈಗೊಳ್ಳುವಂತೆ ಸತ್ಯಶಾಂತಿತ್ಯಾಗಮೂರ್ತಿಯವರು ತಮ್ಮ ಮನವಿಯನ್ನು ಸಂಬಂಧಿತ ಇಲಾಖೆ ಅಧಿಕಾರಿಗಳಿಗೆ ಆಗ್ರಹಿಸಿದ್ದರು. ಅವರ ನಿರಂತರ ಪ್ರಯತ್ನದ ಫಲವಾಗಿ ಇದೀಗ ಅಪಾಯಕಾರಿ ಮರ ತೆರವುಗೊಂಡಿದ್ದು, ಸಾರ್ವಜನಿಕರು, ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.











































































































Leave a Comment

Your email address will not be published. Required fields are marked *

error: Content is protected !!
Scroll to Top