ಮುಂದಿನ ಆರು ದಿನ‌ ರಾಜ್ಯದಲ್ಲಿ ಭಾರೀ ಮಳೆ !

ಜೂನ್ 08ರಿಂದ ಜೂ.13ವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೇ ಜೂನ್ 10 ಮತ್ತು 11 ರಂದು ಕೂಡ ಭಾರೀ ಮಳೆ ಮುಂದುವರಿಯಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮತ್ತು ಸಮುದ್ರ ತೀರದ ನಿವಾಸಿಗಳು ಜಾಗರೂಕರಾಗಿರಲು ತಿಳಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9 ರಂದು ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಇನ್ನುಳಿದಂತೆ ಹಾವೇರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲೂ ಜೂನ್ 14 ರವರೆಗೆ ಉತ್ತಮ ಮಳೆಯಾಗಲಿದೆ ಎಂದು ತಿಳಿಸಿದೆ.
ಜೂನ್ 10 ಮತ್ತು 11 ರಂದು ಕರಾವಳಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 8 ರಿಂದ 10 ರವರೆಗೆ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 8 ರಿಂದ 11 ರವರೆಗೆ, ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.











































































































Leave a Comment

Your email address will not be published. Required fields are marked *

error: Content is protected !!
Scroll to Top