ಅರಂತೋಡು ಗ್ರಾಮದ ಬಿಳಿಯಾರು ಮಾಣಿ ಮೈಸೂರು ರಸ್ತೆಯಲ್ಲಿ ಜೂ.9ರಂದು ಬೆಳಿಗ್ಗೆ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ವರದಿಯಾಗಿದೆ.
ವೇಗವಾಗಿ ಬಂದ ಇನೋವಾ ಕಾರು ಬೈಕ್‌ಗೆ ಢಿಕ್ಕಿ ಹೊಡೆದು ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಢಿಕ್ಕಿಯ ಪರಿಣಾಮ ಬೈಕ್ ಸವಾರ ರಸ್ತೆಗಪ್ಪಳಿಸಿ ಗಾಯಗೊಂಡಿದ್ದು, ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ಅರಂತೋಡು : ಬೈಕ್ ಗೆ ಕಾರು ಡಿಕ್ಕಿ ಹೊಡೆದು ಪರಾರಿ!

























































