ಬೆಳ್ತಂಗಡಿ ತಾಲೂಕಿನ ಬಳ್ಳಮಂಜ-ಪಣಕಜೆ ರಸ್ತೆಯ ಪಾಲ್ಯರದಲ್ಲಿ ನಿನ್ನೆ ಸಂಜೆ ಪಿಕಪ್ ವಾಹನ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಆಕ್ಟಿವಾ ಸವಾರ ಡಾಕಯ್ಯ ಗೌಡ ಹಾಗೂ ಹಿಂಬದಿ ಸವಾರ ಚಂದಪ್ಪ ಮೂಲ್ಯ ಅವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಿಕಪ್ – ಸ್ಕೂಟರ್ ಭೀಕರ ಅಪಘಾತ ; ಇಬ್ಬರು ಸಾವು




















