ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಸುಳ್ಯ : ಆಲೆಟ್ಟಿ ಗ್ರಾಮದ ಕೋಲ್ಚಾರ್ ಪೈಂಬಚಾಲ್ ಸಮೀಪದ ತೋಟಕೊಚ್ಚಿ ಎಂಬಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಮೃತ ವ್ಯಕ್ತಿಯನ್ನು ಪೈಂಬಚಾಲ್ ತೋಟಕೊಚ್ಚಿ ನಿವಾಸಿ ಮಹಮ್ಮದ್ ಶರೀಫ್ (35) ಎಂದು ಗುರುತಿಸಲಾಗಿದೆ.
ವಿದ್ಯುತ್ ಕಂಬಕ್ಕೆ ಮರ ಬಿದ್ದ ಪರಿಣಾಮ ಲೈನ್ ಆಫ್ ಮಾಡಲು ಹೋಗುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿ ದಾರುಣವಾಗಿ ಮೃತಪಟ್ಟರು ಎಂದು ತಿಳಿದು ಬಂದಿದೆ‌.ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ್ದು, ಗಂಭೀರವಾಗಿ ಗಾಯಗೊಂಡ ಮಹಮ್ಮದ್ ಶರೀಫ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.











































































































Leave a Comment

Your email address will not be published. Required fields are marked *

error: Content is protected !!
Scroll to Top