ಅಫ್ಘಾನಿಸ್ತಾನದ ಗಡಿಯಲ್ಲಿ ಪಾಕಿಸ್ತಾನ ಸೇನೆ ಬಾಂಬ್ ದಾಳಿ ನಡೆಸಿದೆ ಎಂದು ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ಗಂಭೀರ ಆರೋಪ ಮಾಡಿದೆ. ಈ ದಾಳಿಯಲ್ಲಿ 11 ಮಕ್ಕಳು ಸೇರಿ ಕನಿಷ್ಠ 13 ಜನ ಸಾವನ್ನಪ್ಪಿದ್ದು, 14 ಜನ ಗಾಯಗೊಂಡಿದ್ದಾರೆ ಎಂದು ವಕ್ತಾರ ಜಬೀಹುಲ್ಲಾ ಮುಜಾಹಿದ್ ತಿಳಿಸಿದ್ದಾರೆ. ಇದು ಅಮಾನವೀಯ ಕೃತ್ಯ ಎಂದು ಖಂಡಿಸಿದ್ದಾರೆ. ಪಾಕಿಸ್ತಾನ ಸರ್ಕಾರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಭಾರತವೂ ಪಾಕಿಸ್ತಾನದ ಈ ಕೃತ್ಯವನ್ನು ಖಂಡಿಸಿದೆ. ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಫೆಬ್ರವರಿಯಿಂದ ಗಡಿ ಸಂಘರ್ಷದಲ್ಲಿ ನೂರಾರು ಜನ ಜೀವ ಕಳೆದುಕೊಂಡಿದ್ದಾರೆ
.

























































