ನಾವು ಉತ್ತಮ ಕೃಷಿಕರು ಕೃಷಿ ಉತ್ಪನ್ನಗಳನ್ನು ಮೌಲ್ಯವರ್ದನೆ ಮಾಡಲು ನಮಗೆ ತಿಳಿದಿಲ್ಲ.ರೈತರು ಕೃಷಿ ಉತ್ಪನ್ನಗಳನ್ನು ಮೌಲ್ಯ ವರ್ದನೆ ಮಾಡಿ ಹೆಚ್ಚು ಲಾಭಗಳಿಸುವ ಮೂಲಕ ಸ್ವಾವಲಂಬಿಗಳಾಗಬೇಕೆಂದು ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೆಶಕ ಹಾಗೂ ಹಲಸು ಮಾವು ಮೇಳದ ಗೌರವ ಮಾರ್ಗದರ್ಶಕರಾದ ಡಾ.ಯು.ಪಿ ಶಿವಾನಂದ ಹೇಳಿದರು.
ಟೀಮ್ ಉಬಾರ್ ಸುಳ್ಯ ರೈತ ಉತ್ಪಾದಕ ಕಂಪೆನಿ,ಪ್ರಣವ ಸೌಹಾರ್ದ ಸಹಕಾರಿ ಸಂಘ, ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ,ಕ್ರಷಿ ಸಂಬಂಧಿತ ಸರಕಾರಿ ಇಲಾಖೆಗಳು,ಹಾಗೂ ಸರಕಾರಿ ಸಂಘಗಳ ಸಹಯೋಗದೊಂದಿಗೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಜೂ.12ರಂದು ಮೂರು ದಿನಗಳ ಹಲಸು ಮಾವು ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸುಳ್ಯ ತಹಶೀಲ್ದಾರ್ ಮಂಜುಳಾ ಹಲಸು – ಮಾವು ಸ್ಟಾಲ್ ಗಳನ್ನು ಉದ್ಘಾಟಿಸಿ ಮಾತನಾಡಿ ರೈತ ಇಂದು ಸವಾಲುಗಳನ್ನು ಮೀರಿ ನಿಂತು ಕೃಷಿಯಲ್ಲಿ ಅಧುನಿಕ ತಂತ್ರಜ್ಞಾನ ಬಳಸಿಕೊಂಡು ಸಾಧಕನಾಗಿದ್ದಾನೆ.ಕ್ರಷಿಗೆ ಇಂದು ಜಾಗತಿಕ ಮಟ್ಟದಲ್ಲಿ ಸ್ಥಾನಮಾನಗಳಿವೆ.ಇದು ಗೌರವದ ಸಂಕೇತ ಎಂದು ಅವರು ಹೇಳಿದರು.
ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾ ಹಲಸಿನ ಕಾಯಿ ತುಂಡರಿಸುವ ಮೂಲಕ ಹಲಸು – ಮಾವು ಮೇಳಕ್ಕೆ ಚಾಲನೆ ನೀಡಿ ಮಾತನಾಡಿ ಹಲಸು ಮಾವು ಮೇಳ ರೈತನ ಬದುಕಿಗೆ ಪೂರಕವಾಗಿ ಆಯೋಜನೆಗೊಂಡಿದೆ ಎಂದು ಹೇಳಿದರು.
ಅಡಿಕೆ ಪತ್ರಿಕೆಯ ಕಾರ್ಯ ನಿರ್ವಾಹಕ ಸಂಪಾದಕ ಶ್ರೀಪಡ್ರೆಯವರು ಮಾತನಾಡಿ ಹಲಸನ್ನು ನಿಯಮಿತವಾಗಿ ತಿಂದರೆ ನಮ್ಮ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು ಎಂದು ಹೇಳಿದರು.
ಹಲಸು ಮಾವು ಮೇಳದ ಅಧ್ಯಕ್ಷ ಹಾಗೂ ಪ್ರಣವ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜಿ.ಆರ್. ಪ್ರಸಾದ್ ವಹಿಸಿದ್ದರು. ರೈತರು ಸಾವಯವ ಕೃಷಿಯತ್ತ ಮುಖ ಮಾಡಬೇಕಾಗಿದ್ದು ಆ ನಿಟ್ಟಿನಲ್ಲಿ ಗಂಭೀರವಾಗಿ ಚಿಂತನೆ ನಡೆಸಬೇಕು ಎಂದು ಹೇಳಿದರು.
ವಿಜಯ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್, ಸುಳ್ಯ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್ ಶುಭಹಾರೈಸಿದರು.
ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್, ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಾ.ಯು.ಪಿ. ಶಿವಾನಂದರನ್ನು ಸನ್ಮಾನಿಸಲಾಯಿತು.
ರೈತ ಉತ್ಪಾಕದ ಕಂಪೆನಿಯ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್ ಸ್ವಾಗತಿಸಿದರು. ಹಲಸು – ಮಾವು ಮೇಳದ ಪ್ರಧಾನ ಕಾರ್ಯದರ್ಶಿ ಜಯರಾಮ ಮುಂಡೋಳಿಮೂಲೆ ವಂದಿಸಿದರು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳುರೈತ ಗೀತೆ ಹಾಡಿದರು. ಮೋಹಿನಿ (ನಿಶಾ) – ವಿಶ್ವನಾಥ್ ,ಯಶ್ವಿತ್ ಕಾಳಮ್ಮನೆ ಕಾರ್ಯಕ್ರಮ ನಿರೂಪಿಸಿದರು.
ರೈತರು ಕೃಷಿ ಉತ್ಪನ್ನಗಳನ್ನು ಮೌಲ್ಯ ವರ್ದನೆ ಮಾಡಿ ಹೆಚ್ಚು ಲಾಭಗಳಿಸುವ ಮೂಲಕ ಸ್ವಾವಲಂಬಿಗಳಾಗಬೇಕು : ಡಾ.ಯು.ಪಿ ಶಿವಾನಂದ



























































