ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಸುಳ್ಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕ ಕೋರ್ ಕಮಿಟಿ ಸಭೆ ಸುಳ್ಯ ಯೋಜನಾ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ವಿಭಾಗದ ಯೋಜನಾಧಿಕಾರಿಗಳಾದ ಶ್ರೀ ಜಯವಂತ್ ಪಟಗಾರ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ
ಶೌರ್ಯ ಕಾರ್ಯಕ್ರಮದ ಧ್ಯೇಯೋದ್ದೇಶಗಳನ್ನು ವಿವರಿಸಿ ಸುಳ್ಯ ತಾಲೂಕಿನ ಶೌರ್ಯ ಘಟಕಗಳ ಮಾಸಿಕ ಸಭೆ ಶ್ರಮದಾನ ಹಾಗೂ ಘಟಕ ಬಲವರ್ಧನೆ ಕುರಿತು ಮಾಹಿತಿ ಮಾರ್ಗದರ್ಶನ ನೀಡಿದರು
ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಯೋಜನಾಧಿಕಾರಿ ಶ್ರೀಮಾಧವ ಗೌಡ “2025-26ನೇ ಸಾಲಿನಲ್ಲಿ ಶೌರ್ಯ ಘಟಕದ ಮೂಲಕ ಹಲವು ಸಮಾಜಮುಖಿ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿವೆ. ಇದೇ ಉತ್ಸಾಹವನ್ನು ಮುಂದುವರೆಸಿಕೊಂಡು 2026-27ನೇ ಸಾಲಿನಲ್ಲಿ ಇನ್ನಷ್ಟು ಸೇವಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ಕರಾವಳಿ ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಮೇಲ್ವಿಚಾರಕರಾದ ನಿತೇಶ್ ಕೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 25 ಸದಸ್ಯರ ತುರ್ತು ಸ್ಪಂದನಾ ಘಟಕವನ್ನು ರಚಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು, ಸೇವಾ ಪ್ರತಿನಿಧಿಗಳು, ಕಚೇರಿಯ ಆಡಳಿತ ಪ್ರಬಂಧಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಘಟಕ ಪ್ರತಿನಿಧಿ ಶ್ರೀ ರಮೇಶ್ ಸ್ವಾಗತಿಸಿ , ಸಂಯೋಜಕರಾದ ಶ್ರೀ ಹರಿಶ್ಚಂದ್ರ ನಿರೂಪಿಸಿ ವಂದಿಸಿದರು.
ಸುಳ್ಯ : ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕ ಕೋರ್ ಕಮಿಟಿ ಸಭೆ



























































