ಸುಳ್ಯ : ಜೇಸಿಐ ಸುಳ್ಯ ಪಯಸ್ವಿನಿ (ರಿ ), ಸುಳ್ಯ, ವತಿಯಿಂದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಜೆಸಿಐ ಸುಳ್ಯ ಪಯಸ್ವಿನಿ ಘಟಕದ 2ನೇ ಕಾರ್ಯಕ್ರಮ ರಕ್ತದಾನ ಜಾಗೃತಿ ಕಾರ್ಯಾಗಾರ ಹಾಗೂ ರಕ್ತದಾನ ಸೇವಾ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜೂನ್ 16ರಂದು ಘಟಕಾಧ್ಯಕ್ಷರಾದ ಜೆ. ಎಫ್ ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕರವರ ಅಧ್ಯಕ್ಷತೆಯಲ್ಲಿ ನಡೆದಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಶಾರದಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ. ಸ್ವರ್ಣಕಲಾ ಎ ಎಸ್ ನೆರವೇರಿಸಿ ಶುಭ ಹಾರೈಸಿದರು.
ರಕ್ತದಾನ ಜಾಗೃತಿ ಕಾರ್ಯಾಗಾರದ ಉಪನ್ಯಾಸವನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೇಸರ್ ಡಾ. ಅವಿನಾಶ್ ಎಸ್ ನಡೆಸಿಕೊಟ್ಟರು.
ಮುಖ್ಯ ಅತಿಥಿಗಳಾಗಿ ಜೇಸಿಐ ಸುಳ್ಯ ಪಯಸ್ವಿನಿಯ ಸ್ಥಾಪಕ ಸದಸ್ಯರೂ, ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘ (ನಿ.) ಪುತ್ತೂರು ಇದರ ಅಧ್ಯಕ್ಷರಾದ ಚಂದ್ರ ಕೋಲ್ಚಾರ್ ಅಭಿನಂದನಾ ಮಾತುಗಳನ್ನಾಡಿದರು. ಈ ಸಂಧರ್ಭದಲ್ಲಿ 109ಭಾರಿ ರಕ್ತದಾನ ಮಾಡುವುದರೊಂದಿಗೆ ನಿಸ್ವಾರ್ಥ ಸೇವೆಯ ಮೂಲಕ ಸಮಾಜಕ್ಕೆ ಪ್ರೇರಣೆಯಾಗುತ್ತಾ, ಅದೆಷ್ಟೋ ಜೀವಗಳನ್ನು ಉಳಿಸುವ ಮಹಾಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿರುವ ಶ್ರೀ. ಶೈಲೇಶ್ ಅಂಬೆಕಲ್ಲು ಅವರಿಗೆ ಜೇಸಿಐ ಸುಳ್ಯ ಪಯಸ್ವಿನಿಯ 2026ರ ರಕ್ತದಾನ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ
ಜೆಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷರಾದ ಪಿ. ಎಸ್ ಗಂಗಾಧರ್ ಉಪಸ್ಥಿತರಿದ್ದರು.
ಮಾಹಿತಿ ಕಾರ್ಯಾಗಾರದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಸಾರ್ವಜನಿಕರು ಹಾಗೂ ಜೇಸಿಐ ಸುಳ್ಯ ಪಯಸ್ವಿನಿಯ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಸದುಪಯೋಗ ಪಡೆದುಕೊಂಡರು.
ಜೇಸಿ ಸತ್ಯಶಾಂತಿ ತ್ಯಾಗ ಮೂರ್ತಿ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿ, ಜೇಸಿ ಪ್ರಶಾಂತ್ ಅಂಬೆಕಲ್ಲು ಜೇಸಿವಾಣಿ ವಾಚಿಸಿದರು. ಕಾರ್ಯಕ್ರಮ ಸಂಚಾಲಕರಾದ ಜೇಸಿ. ಮಹೇಶ್ ಮೇರ್ಕಜೆ ಸನ್ಮಾನಿತರ ಸನ್ಮಾನ ಪತ್ರವನ್ನು ಸಭೆಗೆ ವಾಚಿಸಿದರು. ಕಾರ್ಯದರ್ಶಿ ಜೇಸಿ ಹೆಚ್. ಜಿ. ಎಫ್. ತಾರಾ ಮಾದವ ಚೂಂತಾರು ವಂದಿಸಿದರು.
ಜೇಸಿಐ ಸುಳ್ಯ ಪಯಸ್ವಿನಿ -ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಆಯೋಜಿದ್ದ 2ನೇ ಕಾರ್ಯಕ್ರಮ ರಕ್ತದಾನ ಮಾಹಿತಿ ಕಾರ್ಯಾಗಾರ ಹಾಗೂ ರಕ್ತದಾನ ಸೇವಾ ರತ್ನ ಪ್ರಶಸ್ತಿ ಪ್ರದಾನ



























































