ಸುಳ್ಯ ನಾವೂರು ಕಾರಣಿಕ ದೈವ ಶ್ರೀ ಕಲ್ಕುಡ ಕ್ಷೇತ್ರದ ನವೀಕೃತ ಶಿಲಾಮಯ ಗುಡಿಯಲ್ಲಿ ಶ್ರೀ ಕಲ್ಕುಡ, ಕಲ್ಲುರ್ಟಿ ದೈವಗಳ ಹಾಗು ಗುಳಿಗ ದೈವದ ಕಟ್ಟೆಯಲ್ಲಿ ಗುಳಿಗ ದೈವದ ಪುನರ್ ಪ್ರತಿಷ್ಠಾ ಕಲಶೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು. ತಂತ್ರಿಗಳಾದ ಬ್ರಹ್ಮಶ್ರೀ ವೇ.ಮೂ ಗಣೇಶ ತಂತ್ರಿ ದೇಲಂಪಾಡಿಯ ಮಾರ್ಗದರ್ಶನದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಬ್ರಹ್ಮಕಲಶ ಪೂಜೆ ನಡೆದು 8.08 ರಿಂದ 9.06ರ ಕರ್ಕಾಟಕ ಲಗ್ನದ ಶುಭ ಮುಹೂರ್ತದಲ್ಲಿ ಶ್ರೀ ಕಲ್ಕುಡ, ಕಲ್ಲುರ್ಟಿ, ಗುಳಿಗ ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ನೆರವೇರಿತು. ತದನಂತರ
ದೈವಗಳಿಗೆ ತಂಬಿಲ, ಮಹಾಪೂಜೆ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನ ಆಡಳಿತ ಧರ್ಮದರ್ಶಿ ಪಿ.ಕೆ.ಉಮೇಶ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್,ಆಡಳಿತ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಸಾವಿರಾರು ಭಕ್ತರು ಆಗಮಿಸಿ ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ದೈವಗಳ ಪ್ರಸಾದ ಸ್ವೀಕರಿಸಿದರು.
ಸುಳ್ಯ : ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಕಲ್ಕುಡ ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಕಲಶೋತ್ಸವ





























































