ಸುಳ್ಯ : ಜನಸಂಘದ ಸ್ಥಾಪಕರಾದ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನ ಆಚರಣೆ

ಭಾರತೀಯ ಜನತಾ ಪಕ್ಷದ ಸುಳ್ಯ ಮಂಡಲದ ವತಿಯಿಂದ ರಾಷ್ಟ್ರದ ಏಕತೆ, ಅಖಂಡತೆ ಮತ್ತು ಸ್ವಾಭಿಮಾನದ ಸಂಕೇತರಾದ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನವನ್ನು ಜೂ.23ರಂದು ಆಚರಿಸಲಾಯಿತು.
ನಗರದ ಬಿಜೆಪಿ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆದ ಈ ಕಾರ್ಯಕ್ರಮದಲ್ಲಿ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ದೇಶಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಮಾತಾನಾಡಿದ SIR ಸುಳ್ಯ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಅವರು ಮುಖರ್ಜಿ ಅವರ ಸಾಧನೆಗಳು,ಜೀವನ ಶೈಲಿ, ಸಾರ್ಥಕತೆಯ ಸಮಾಜ ಸೇವೆ ಮತ್ತು ಅವರ ರಾಜಕೀಯ ಜೀವನದ ವಿಚಾರಗಳನ್ನು ತಿಳಿಸಿ ಕಾಶ್ಮೀರ ಭಾರತದ ಜೊತೆ ಅಖಂಡವಾಗಿ ಉಳಿಯಲು ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನವೇ ಕಾರಣ ಎಂದು ತಿಳಿಸಿದರು .
ಈ ಸಂದರ್ಭದಲ್ಲಿ ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ,ವಿನಯ್ ಕುಮಾರ್ ಕಂದಡ್ಕ, ಜಿಲ್ಲಾ ಕಾರ್ಯದರ್ಶಿ ಪುಪ್ಷಾ ಮೇದಪ್ಪ,BLO-1 ಹರೀಶ ಕಂಜಿಪಿಲಿ ಸಹಿತ ನಗರದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.



















































































































Leave a Comment

Your email address will not be published. Required fields are marked *

error: Content is protected !!
Scroll to Top