ಕೊಡಿಯಾಲಬೈಲ್ : ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ

ಜೇಸಿಐ ಸುಳ್ಯ ಪಯಸ್ವಿನಿ ಹಾಗೂ ಸುಳ್ಯ ಪೊಲೀಸ್ ಇಲಾಖಾ ವತಿಯಿಂದ ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ-2026 ಪ್ರಯುಕ್ತ ಜೂನ್ 23ರಂದು ಮಹಾತ್ಮಾ ಗಾಂಧಿ ಮಲ್ನಾಡ್ ಪ್ರೌಢಶಾಲೆ ಕೊಡಿಯಾಲಬೖಲ್ ಸುಳ್ಯ ಇಲ್ಲಿನ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಾಗಾರವನ್ನು ಸುಳ್ಯ ಪೊಲೀಸ್ ಇಲಾಖೆಯ ಸಹಾಯಕ ಉಪ ನಿರೀಕ್ಷಕರಾದ ಶ್ರೀ. ತಾರನಾಥ್ ಹಾಗೂ ಪ್ರೋಭೇಷನರಿ ಸಹಾಯಕ ಉಪ ನಿರೀಕ್ಷಕರಾದ ಶ್ರೀ ಕೃಷ್ಣ ಜಿ. ಬಿ, ಯವರು ನಡೆಸಿಕೊಟ್ಟರು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೇಸಿಐ ಸುಳ್ಯ ಪಯಸ್ವಿಯ ಅಧ್ಯಕ್ಷರಾದ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಹಾತ್ಮಾ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಯ ಸಂಚಾಲಕರಾದ ಶ್ರೀ ದೊಡ್ಡಣ್ಣ ಬರೆಮೇಲು ಉಪಸ್ಥಿತರಿದ್ದು ಶುಭಹಾರೖಸಿದರು.
ಜೇಸಿಐ ಸುಳ್ಯ ಪಯಸ್ವಿನಿಯ ಕಾರ್ಯದರ್ಶಿ ತಾರಾ ಮಾದವ ಚೂಂತಾರು ಹಾಗೂ ಸದಸ್ಯರು ಉಪಸ್ಥಿತರಿದ್ದರು.



















































































































ಸಂಸ್ಥೆಯ ಮುಖ್ಯ ಶಿಕ್ಷಕರಾದ ಶ್ರೀಮತಿ. ವಿಜಯಲಕ್ಷ್ಮಿ ಇವರು ಅತಿಥಿಗಳನ್ನು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಚಿತ್ರಲೇಖಾ ಮಡಪ್ಪಾಡಿ. ಸಹಕರಿಸಿದರು.

Leave a Comment

Your email address will not be published. Required fields are marked *

error: Content is protected !!
Scroll to Top