ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಹರಿಹರ ಪಲ್ಲತ್ತಡ್ಕ, ಐನೆಕಿದು, ಬಾಳುಗೋಡು ಮತ್ತು ಕೊತ್ನಡ್ಕ ಪ್ರಗತಿ ಬಂಧು ಸ್ವಸಹಾಯ ಸಂಘ ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ಈ ಸಮಾರಂಭದಲ್ಲಿ ಸುಳ್ಯ ತಾಲೂಕಿನ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾದ ವೆಂಕಪ್ಪ ಗೌಡರವರು ದೀಪವನ್ನು ಪ್ರಜ್ವಲಿಸಿ ಮಾತನಾಡುತ್ತ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಸೇರಿಕೊಂಡು ಹಲವಾರು ಕುಟುಂಬಗಳು ಉತ್ತಮವಾಗಿ ಅಭಿವೃದ್ಧಿ ಹೊಂದಿ ಸ್ವಾವಲಂಬಿ ಜೀವನವನ್ನು ನಡೆಸುತ್ತಿದ್ದಾರೆ. ಇದನ್ನು ಮುಂದೆಯೂ ಕೂಡ ಮುಂದುವರೆಸಿಕೊಂಡು ಹೋಗುವುದು ನಮ್ಮೆಲ್ಲರ ಹೊಣೆಯಾಗಿದೆ. ಒಕ್ಕೂಟದ ನೂತನ ಪದಾಧಿಕಾರಿಗಳು ಇದರ ಜವಾಬ್ದಾರಿಯನ್ನು ಉತ್ತಮ ರೀತಿಯಲ್ಲಿ ವಹಿಸಿಕೊಂಡು ಹೋಗಬೇಕು ಎಂದು ಹೇಳಿದರು.
ಈ ಸಮಾರಂಭದಲ್ಲಿ ಜವಾಬ್ದಾರಿ ಹಸ್ತಾಂತರವನ್ನು ಮಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಯೋಜನಾಧಿಕಾರಿಯವರಾದ ಮಾಧವ ಗೌಡರವರು ಮಾತನಾಡುತ್ತ, ಯೋಜನೆಯಲ್ಲಿ ಹತ್ತು ಹಲವಾರು ಕಾರ್ಯಕ್ರಮಗಳು ಇದ್ದು, ಇವುಗಳನ್ನು ತನ್ನ ಕಾರ್ಯಕ್ಷೇತ್ರಗಳಲ್ಲಿ ಅನುಷ್ಠಾನ ಮಾಡುವಲ್ಲಿ ಒಕ್ಕೂಟಗಳು ಮಹತ್ತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಬಂದಿದೆ. ಯೋಜನೆಯ ಪ್ರತಿಯೊಂದು ನೀತಿ ನಿಯಮಗಳನ್ನು ಪಾಲಿಸುತ್ತ ಬಂದಿದೆ. ಮುಂದೆಯೂ ಕೂಡ ನೂತನ ಒಕ್ಕೂಟದ ಪದಾಧಿಕಾರಿಗಳು ಯೋಜನೆಯ ಪ್ರತಿಯೊಂದು ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿಕೊಂಡು, ಪಾಲುದಾರ ಬಂಧುಗಳ ಕುಟುಂಬ ಅಭಿವೃದ್ಧಿ ಪಡಿಸುವಲ್ಲಿ ಮತ್ತು ಗ್ರಾಮದ ಅಭಿವೃದ್ಧಿ ಪಡಿಸುವಲ್ಲಿ ಮಹತ್ತರವಾದ ಜವಾಬ್ದಾರಿಯ ಪಾತ್ರವನ್ನು ವಹಿಸಿಕೊಂಡು ಹೋಗಬೇಕು ಎಂದು ಹೇಳಿದರು.
ಈ ಸಮಾರಂಭದ ಮುಖ್ಯ ಅತಿಥಿಗಳಾದ ಗುತ್ತಿಗಾರಿನ ಶ್ರೀ ಮುತ್ತಪ್ಪ ತಿರುವಪ್ಪನ್ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ವೆಂಕಟ್ ವಳಲಂಬೆರವರು, ಸುಬ್ರಹ್ಮಣ್ಯ ವಲಯ ಜನ ಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಸತೀಶ್ ಟಿ ಎನ್ ರವರು, ಬಾಳುಗೋಡು ಒಕ್ಕೂಟದ ಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಉಷಾ ಪ್ರಭಾಕರ ಕಿರಿಭಾಗರವರು, ಸುಬ್ರಹ್ಮಣ್ಯ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ವಲಯ ಅಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳರವರು ಶುಭಕೋರಿದರು.
ಈ ಸಮಾರಂಭದಲ್ಲಿ ಸುಬ್ರಹ್ಮಣ್ಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರನ್ನು, ನವಜೀವನ ಸಮಿತಿಯ ಸದಸ್ಯರನ್ನು, ವಲಯ ಭಜನಾ ಪರಿಷತ್ ನ ಪದಾಧಿಕಾರಿಗಳನ್ನು, ಹರಿಹರ ಪಲ್ಲತ್ತಡ್ಕ, ಐನೆಕಿದು, ಬಾಳುಗೋಡು, ಕೊತ್ನಡ್ಕ ಒಕ್ಕೂಟಗಳ ನಿಕಟ ಪೂರ್ವ ಪದಾಧಿಕಾರಿಗಳನ್ನು ಮತ್ತು ನಿಕಟ ಪೂರ್ವ ಉಪಸಮಿತಿ ಹಾಗೂ ದಾಖಲಾತಿ ಸಮಿತಿಯ ಸದಸ್ಯರನ್ನು ಗುರುತಿಸಲಾಯಿತು. 2025-26ನೇ ಸಾಲಿನ ಒಲಿoಪ್ಯಾಡ್ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಒಲಿoಪ್ಯಾಡ್ ಪ್ರಮಾಣ ಪತ್ರವನ್ನು ವಿತರಣೆ ಮಾಡಲಾಯಿತು.
ಈ ಸಮಾರಂಭದಲ್ಲಿ ಭಜನಾ ಪರಿಷತ್ ನ ವಲಯ ಅಧ್ಯಕ್ಷರಾದ ಚಂದ್ರಶೇಖರ ಕೊಂದಳರವರು, ಸೇವಾಪ್ರತಿನಿಧಿಗಳಾದ ನಾಗವೇಣಿ ಮತ್ತು ರೇಖಾರವರು, ಹರಿಹರ ಪಲ್ಲತ್ತಡ್ಕ, ಐನೆಕಿದು, ಬಾಳುಗೋಡು, ಕೊತ್ನಡ್ಕ ಒಕ್ಕೂಟಗಳ ನಿಕಟ ಪೂರ್ವ ಮತ್ತು ನೂತನ ಅಧ್ಯಕ್ಷರುಗಳು ಉಪಸ್ಥಿತರಿದ್ದರು.
ಈ ಸಮಾರಂಭದಲ್ಲಿ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಕೆ ರವರು ಸಾಧನೆಯ ವರದಿ ವಾಚನವನ್ನು ಮಂಡಿಸಿದರು.
ಈ ಕಾರ್ಯಕ್ರಮದಲ್ಲಿ ಹರಿಹರ ಪಲ್ಲತ್ತಡ್ಕ, ಐನೆಕಿದು, ಬಾಳುಗೋಡು, ಕೊತ್ನಡ್ಕ ಒಕ್ಕೂಟಗಳ ನಿಕಟ ಪೂರ್ವ ಮತ್ತು ನೂತನ ಪದಾಧಿಕಾರಿಗಳು, ಎಲ್ಲಾ ಒಕ್ಕೂಟಗಳ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು, ಜನ ಜಾಗೃತಿ ವೇದಿಕೆಯ ಪದಾಧಿಕಾರಿಗಳು, ಭಜನಾ ಪರಿಷತ್ ನ ಪದಾಧಿಕಾರಿಗಳು, ನವಜೀವನ ಸಮಿತಿಯ ಸದಸ್ಯರುಗಳು ಭಾಗವಹಿಸಿದರು.
ಈ ಕಾರ್ಯಕ್ರಮದಲ್ಲಿ ಹರಿಹರ ಪಲ್ಲತ್ತಡ್ಕ ಒಕ್ಕೂಟದ ನೂತನ ಅಧ್ಯಕ್ಷರಾದ ಗಿರೀಶ್ ಎಂ ಟಿ ರವರು ಸ್ವಾಗತಿಸಿದರು. ಬಾಳುಗೋಡು ಒಕ್ಕೂಟದ ನೂತನ ಅಧ್ಯಕ್ಷರಾದ ನಿತಿನ್ ಕುಮಾರ್ ರವರು ಕಾರ್ಯನಿರೂಪಿಸಿದರು. ಹರಿಹರ ಪಲ್ಲತ್ತಡ್ಕ ಒಕ್ಕೂಟದ ನೂತನ ಕಾರ್ಯದರ್ಶಿಯವರಾದ ಪುಷ್ಪಾವತಿರವರು ವಂದಿಸಿದರು.
ಹರಿಹರ ಪಲ್ಲತ್ತಡ್ಕ : ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭ






























































