ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿಯೋಜನೆ,ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ, ಅಡಿಯಲ್ಲಿ ಮಾದಕವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ರಾಜ್ಯದಾದ್ಯಂತ ಆನ್ಲೈನ್ ಜಾಗೃತಿ ಕಾರ್ಯಕ್ರಮದ ಪ್ರಯುಕ್ತ ಸಂಪಾಜೆ ಸಂಯುಕ್ತ ಪದವಿಪೂರ್ವ ಕಾಲೇಜುನಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ಮಾಡಲಾಯಿತು. ಕಾರ್ಯಕ್ರಮವನ್ನು ಟ್ರಸ್ಟ್ ನ ಹಿರಿಯ ನಿರ್ದೇಶಕರಾದ ಶ ಕುಂದ ಲಕಾಡು ಶ್ರೀ ನಾರಾಯಣ ಭಟ್ ರವರು ದೀಪ ಬೆಳಗಿಸಿ ದುಶ್ಚಟ ಮುಕ್ತ ಭಾರತ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ ಎಂದು ಶುಭಹಾರೈಸಿದರು ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀ ಜಗನ್ನಾಥ ಕಾಯರ ಯುವಜನತೆಗೆ ಮಾದಕ ವಸ್ತು ಗಳಿಂದ ದೂರ ಇದ್ದು ಉತ್ತಮ ಪ್ರಜೆಗಳಾಗಿ ಬಾಳಬೇಕೆಂದರು ವೇದಿಕೆಯಲ್ಲಿ ಪ್ರಭಾರಿ ಮುಖ್ಯ ಶಿಕ್ಷಕರಾದ ಶ್ರೀ ಅಪ್ಪು ಕುಂಜಿ ಮತ್ತು ಪೊಲೀಸ್ ಇಲಾಖೆ ಶ್ರೀ ಮಂಜುನಾಥ್ ಉಪಸ್ಥಿತರಿದ್ದರು ಪ್ರಾಂಶುಪಾಲರಾದ ಶ್ರೀ ಲೋಕ್ಯಾ ನಾಯ್ಕ ಬಿ ರವರು ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು ವಲಯ ಮೇಲ್ವಿಚಾರಕ ಹರೀಶ್ ಆಚಾರ್ಯ ಧನ್ಯವಾದವಿತ್ತರು ಕಾಲೇಜು ನ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳು ಸೇವಾಪ್ರತಿನಿಧಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಸಂಪಾಜೆ : ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ






























































