ಸುಬ್ರಹ್ಮಣ್ಯ : ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ(ರಿ) ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ, ಆರಕ್ಷಕ ಠಾಣೆ ಸುಬ್ರಹ್ಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಬ್ರಹ್ಮಣ್ಯ ವಲಯ ಜನ ಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಸತೀಶ್ ಟಿ ಎನ್ ರವರ ಅಧ್ಯಕ್ಷತೆಯಲ್ಲಿ ಜೂ.30ರಂದು ಅಂತಾರಾಷ್ಟ್ರೀಯ ಮಾದಕ ವಸ್ತು ದಿನಾಚರಣೆ ಕಾರ್ಯಕ್ರಮವನ್ನು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು.ಈ ಕಾರ್ಯಕ್ರಮವನ್ನು ಸುಳ್ಯ ತಾಲೂಕಿನ ಜನ ಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ವಿಮಲಾರಂಗಯ್ಯರವರು ದೀಪ ಪ್ರಜ್ವಲಿಸುವ ಮುಖೇನ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿರವರಾದ ಲೋಕೇಶ್ ಪೀರಾನ ಮನೆಯವರು ಮಾತನಾಡುತ್ತ, ಈಗಿನ ಹದಿಹರೆಯದ ಮಕ್ಕಳು ಇಂದಿನ ಸಮಾಜದಲ್ಲಿ ಮಾದಕ ವಸ್ತುಗಳ ಕಡೆಗೆ ಆಕರ್ಷಣೆ ಆಗುವುದನ್ನು ತಡೆಗಟ್ಟಿ ಸ್ವಸ್ಥ ಮತ್ತು ಅರೋಗ್ಯ ಪೂರ್ಣವಾದ ಯುವ ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ನಾವೆಲ್ಲರು ಕಟಿಬದ್ಧರಾಗಿ ದುಶ್ಚಟ ಮುಕ್ತ ಸಮಾಜವನ್ನು ಕಟ್ಟೋಣ ಎಂದು ಹೇಳಿದರು.ಈ ಸಂದರ್ಭದಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ ನಾಯಕ್ ರವರು, ಸುಬ್ರಹ್ಮಣ್ಯ ಆರಕ್ಷಕ ಠಾಣೆಯ ಆರಕ್ಷಕ ನಿರೀಕ್ಷಕರಾದ ಆಂಜನೇಯ ರೆಡ್ಡಿರವರು, ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಗಿರಿಧರ ಸ್ಕಂದರವರು, ಸುಬ್ರಹ್ಮಣ್ಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಪವಿತ್ರದಿನೇಶ್ ರವರು ಉಪಸ್ಥಿತರಿದ್ದರು.ಈ ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಕೆ ರವರು ಸ್ವಾಗತಿಸಿದರು. ಕಾಲೇಜಿನ ಇತಿಹಾಸ ಉಪನ್ಯಾಸಕರಾದ ರತ್ನಾಕರರವರು ಕಾರ್ಯನಿರೂಪಿಸಿದರು. ಸುಬ್ರಹ್ಮಣ್ಯ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿಯಾವರಾದ ಶೈಲಜಾರವರು ಧನ್ಯವಾದವಿತ್ತರು





















































































































Leave a Comment

Your email address will not be published. Required fields are marked *

error: Content is protected !!
Scroll to Top