ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಫಲಿತಾಂಶ ಸುಧಾರಿಸಲು ಮಹತ್ವದ ಸುತ್ತೋಲೆ ಹೊರಡಿಸಿದೆ. ಶಾಲಾ ಅವಧಿಯಲ್ಲಿ ಶಿಕ್ಷಕರು, ಮುಖ್ಯೋಪಾಧ್ಯಾಯರು ಕಡ್ಡಾಯವಾಗಿ ಶಾಲೆಯಲ್ಲೇ ಹಾಜರಿದ್ದು ಬೋಧನೆ ಮಾಡಬೇಕು. ಯಾವುದೇ ತರಬೇತಿ, ಸಭೆ, ವಿಡಿಯೋ ಕಾನ್ನರೆನ್ಸ್, ವಿದ್ಯಾರ್ಥಿಗಳನ್ನು ಹೊರಗೆ ಕರೆದೊಯ್ಯುವುದು, ಬಾಹ್ಯ ಪರೀಕ್ಷೆಗಳನ್ನು ಶಾಲಾ ದಿನಗಳಲ್ಲಿ ನಡೆಸಲು ನಿಷೇಧ ಹೇರಲಾಗಿದೆ. ಡೇಟಾ ಎಂಟ್ರಿ ಕೆಲಸಕ್ಕೂ ಶಿಕ್ಷಕರನ್ನು ಬಳಸುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಈ ಆದೇಶ ತಕ್ಷಣದಿಂದ ಜಾರಿಗೆ ಬರಲಿದೆ.
































































