ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಐ.ಎ. ಅಧಿಕಾರಿಗಳು ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ ಏಕಕಾಲದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಡಗು ಜಿಲ್ಲೆಯ ಸೋಮರಪೇಟೆ ನಿವಾಸಿ ಅಬ್ದುಲ್ ನಾಸೀರ್(41), ಬೆಳ್ತಂಗಡಿ ತಾಲೂಕಿನ ನೌಷದ್(32) ಬಂಧಿತ ಆರೋಪಿಗಳು.
ಆರೋಪಿಗಳು ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದ ಮೇಲೆ ಇವರನ್ನು ಬಂಧಿಸಲಾಗಿದೆ.
ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಬಂಧನ



















