ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88ವರ್ಷ) ವಿಧಿವಶರಾಗಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ರಾಮಚಂದ್ರೇಗೌಡರ ನಿಧನಕ್ಕೆ ರಾಜ್ಯದ ರಾಜಕೀಯ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ “ರಾಮಚಂದ್ರೇಗೌಡರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ರಾಜ್ಯದ ಅಭಿವೃದ್ಧಿ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಅವರು ನೀಡಿದ ಕೊಡುಗೆ ಅಪಾರ. ಅವರೊಬ್ಬ ಸರಳ ಮತ್ತು ಸಜ್ಜನ ರಾಜಕಾರಣಿಯಾಗಿದ್ದರು. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ,” ಎಂದು ಪ್ರಾರ್ಥಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಸುದೀರ್ಘ ಕಾಲದ ಒಡನಾಡಿಯ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ ಇನ್ನಿಲ್ಲ




































































