ನಾಳೆ (ಜು.22): ಸುಳ್ಯದಲ್ಲಿ ಕೆಜೆಯು ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿಕೂಟ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿಕೂಟ ಸುಳ್ಯದ ರಂಗಮಯೂರಿ ಕಲಾಶಾಲೆಯಲ್ಲಿ ಜು. 22 ರಂದು ನಡೆಯಲಿರುವುದು.



































































































































ಶಾಸಕಿ ಕು.ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ನಿವೃತ್ತ ಪ್ರಾಧ್ಯಾಪಕ ಡಾ. ವಿಶ್ವನಾಥ ಬದಿಕಾನ ಆಟಿ ಮತ್ತು ಪತ್ರಿಕಾ ದಿನದ ಕುರಿತು ವಿಶೇಷ ಉಪನ್ಯಾಸ ಮಾಡಲಿರುವರು.
ಕೆಜೆಯು ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಯಶ್ವಿತ್ ಕಾಳಂಮನೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕ ಅಶೋಕ್ ಪ್ರಭು, ಕೆಜೆಯು ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್, ರಂಗಮಯೂರಿ ಕಲಾ ಶಾಲೆಯ ಸಂಚಾಲಕ ಲೋಕೇಶ್ ಊರುಬೈಲು, ಕೆಜೆಯು ಜಿಲ್ಲಾಧ್ಯಕ್ಷ ಈಶ್ವರ ವಾರಣಾಸಿ, ಪ್ರೆಸ್‌ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಉಪಸ್ಥಿತರಿರುವರು.

ಹಿರಿಯ ಪತ್ರಿಕಾ ವಿತರಕರಾದ ಅಪ್ಪಕುಂಞಿ ನಾರ್ಕೋಡು ಹಾಗೂ ಎಸ್.ಎನ್. ಪ್ರಸಾದ್ ಪಂಜಿಕಲ್ಲುರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಸಭಾ ಕಾರ್ಯಕ್ರಮದ ನಂತರ ಖ್ಯಾತ ಮಿಮಿಕ್ರಿ ಕಲಾವಿದ ಪಟ್ಟಾಭಿರಾಮ ಸುಳ್ಯರವರಿಂದ ಮಿಮಿಕ್ರಿ, ಬಳಿಕ ಆಟಿ ಖಾದ್ಯಗಳೊಂದಿಗೆ ವಿಶೇಷ ಸಹಭೋಜನ ನಡೆದು, ಚೆನ್ನೆಮಣೆ ಸೇರಿದಂತೆ ವಿವಿಧ ಆಟಿ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ.

Leave a Comment

Your email address will not be published. Required fields are marked *

error: Content is protected !!
Scroll to Top