SIR ಕರ್ತವ್ಯದಲ್ಲಿದ್ದ ಶಿಕ್ಷಕಿ ಹೃದಯಾಘಾತದಿಂದ ಸಾವು

ಬೆಂಗಳೂರಿನ ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಶಮಂತಾ ಕುಮಾರಿ (44) SIR ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇತ್ತೀಚೆಗೆ ಬಿಎಲ್‌ಒ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಇವರಿಗೆ ಶುಗ‌ರ್, ಬಿಪಿ ಹೆಚ್ಚಾಗಿ ತೀವ್ರ ಜ್ವರ ಬಂದಿತ್ತು. ಗುರುವಾರ (ಜು.23) ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೇಲಾಧಿಕಾರಿಗಳು ಎಸ್‌ಐಆ‌ರ್ ಪ್ರಕ್ರಿಯೆ ಬೇಗ ಮುಗಿಸುವಂತೆ ಒತ್ತಡ ಹಾಕುತ್ತಿದ್ದರು ಮತ್ತು ಈ ಕೆಲಸದಿಂದ ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದರು. ಮೇಲಾಧಿಕಾರಿಗಳ ಒತ್ತಡದಿಂದ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ಶಿಕ್ಷಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಒಂದು ಕಡೆ ಶಿಕ್ಷಕರು SIR ಪ್ರಕಿಯೆಯಲ್ಲಿ ತೊಡಗಿಸಿಕೊಂಡಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠಗಳು ಸಮರ್ಕವಾಗಿ ನಡೆಯದೆ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದೆ.



































































































































Leave a Comment

Your email address will not be published. Required fields are marked *

error: Content is protected !!
Scroll to Top