ಸಾಹಿತಿ, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಅನುರಾಧ ಕುರುಂಜಿಯವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026” ನ್ನು ಜುಲೈ 26ರಂದು ಗಡಿನಾಡು ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮದ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ವೇದಿಕೆಯಲ್ಲಿ ಪ್ರದಾನ ಮಾಡಲಾಯಿತು.
ಶಿಕ್ಷಣ ಕ್ಷೇತ್ರ, ಸಾಹಿತ್ಯ ಸಮಾಜಸೇವೆ ಹಾಗೂ ಸಂಘಟನೆಯಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಗಾಗಿ ಡಾ. ಕುರುಂಜಿಯವರಿಗೆ ನೀಡಲ್ಪಟ್ಟ ಈ ಪ್ರಶಸ್ತಿಯನ್ನು ಶ್ರೀ ಶಂಕರಾಚಾರ್ಯ ಸಂಸ್ಥಾನ, ಶ್ರೀಮದೆಡನೀರು ಮಠಾಧೀಶರಾದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ , ಸಮ್ಮೇಳನ ಸರ್ವಾಧ್ಯಕ್ಷರಾದ ಡಾ. ಸಿ ಸೋಮಶೇಖರ್, ಜಾನಪದ ಪರಿಷತ್ತಿನ ಡಾ. ಬಾಲಾಜಿ,
ಗಡಿನಾಡು ಕಾಸರಗೋಡಿನ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್, ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.





































































