ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಮತ್ತು ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ವತಿಯಿಂದ ಜು.26 ರಂದು ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಪಂಜ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ವಲಯ ಅರಣ್ಯಾಧಿಕಾರಿ ಸಂಧ್ಯಾ ಗಿಡ ನೆಡುವ ಮೂಲಕ ಉದ್ಘಾಟನೆಯನ್ನು ಮಾಡಿದರು. ಅಧ್ಯಕ್ಷತೆಯನ್ನು ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ ವಹಿಸಿದ್ದರು. ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಪಂಚಶ್ರೀ ಪಂಜ ಸ್ಪೋರ್ಟ್ಸ್ ಅಧ್ಯಕ್ಷ ಹಿತೇಶ್ ಪಂಜದಬೈಲು, ಉಪ ವಲಯ ಅರಣ್ಯ ಅಧಿಕಾರಿ ಪ್ರಕಾಶ್ ಅಗಸಿಮನಿ, ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ದೇವಿ ಪ್ರಸಾದ ಚಿಕ್ಕುಳಿ, ಯುವಜನ ಸಂಯುಕ್ತ ಮಂಡಳಿ ನಿರ್ದೇಶಕ ದಿನೇಶ್ ಹಾಲೆಮಜಲು,ಯುವಜನ ಸಂಯುಕ್ತ ಮಂಡಳಿ ಕ್ರೀಡಾ ಕಾರ್ಯದರ್ಶಿ ಜನಾರ್ಧನ ನಾಗತೀರ್ಥ, ವ್ಯವಸ್ಥಾಪನಾ ಸಮಿತಿ ಸದಸ್ಯ ಸಂತೋಷ್ ರೈ ಪಲ್ಲತ್ತಡ್ಕ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಶಿ ದಾಸ್ ಸ್ವಾಗತಿಸಿದರು, ಹೇಮಂತ್ ರೈ ವಂದಿಸಿದರು. ವಿಜೇಶ್ ಹಿರಿಯಡ್ಕ ನಿರೂಪಿಸಿದರು. ದೇವಸ್ಥಾನದ ವಠಾರದಲ್ಲಿ 50 ಕ್ಕೂ ಅಧಿಕ ರಾಮ್ ಪತ್ರ, ರಂಬೂಟನ್, ಲಕ್ಷ್ಮಣಫಲ ಗಿಡಗಳನ್ನು ನೆಡಲಾಯಿತು. ಈ ಕಾರ್ಯಕ್ರಮದಲ್ಲಿ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ನ ಸದಸ್ಯರು ಭಾಗವಹಿಸಿದರು.
ಪಂಜ : ವನಮಹೋತ್ಸವ ಕಾರ್ಯಕ್ರಮ





































































