ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು ಪಂಜ-ವಲಯ ಇದರ ಕೂತ್ಕುಂಜ, ಕೇನ್ಯ, ಐವತ್ತೊಕ್ಕು ಪ್ರಗತಿ ಬಂದು ಸ್ವಸಹಾಯ ಸಂಘಗಳ ನೂತನ ಒಕ್ಕೂಟಗಳ ಪದಗ್ರಹಣ ಸಮಾರಂಭ ಜು. 26 ರಂದು ಪಂಜ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಜರುಗಿತು.
ಪ್ರಗತಿ ಪರ ಕೃಷಿಕ ಕುಶಾಲಪ್ಪ ಗೌಡ ದೊಡ್ಡಮನೆ ಉದ್ಘಾಟಿಸಿ ಶುಭಹಾರೈಸಿದರು.ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪಂಜ ವಲಯ ಅಧ್ಯಕ್ಷ ಧರ್ಮಪಾಲ ಕಲ್ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ) ಯೋಜನಾಧಿಕಾರಿ ಮಾಧವ ರವರು ‘ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮತ್ತು ಒಕ್ಕೂಟದ ಪದಾಧಿಕಾರಿಗಳ ಕರ್ತವ್ಯದ ಬಗ್ಗೆ ತಿಳಿಸಿದರು.
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ವೆಂಕಪ್ಪ ಗೌಡ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನಿಕಟ ಪೂರ್ವ ರಾಜ್ಯಾಧ್ಯಕ್ಷ ಬಾಲಕೃಷ್ಣ ಪುತ್ರ, ಸುಳ್ಯ ತಾಲೂಕು ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಜೇ ಸಂಯೋಜನೆ ಪಂಜ ಪಂಚಶ್ರೀ ಅಧ್ಯಕ್ಷ ದೇವಿಪ್ರಸಾದ್ ಚಿಕ್ಕುಳಿ ಇದ್ದರು.
ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಪಂಜ ವಲಯ ಅಧ್ಯಕ್ಷ ಮೊನಪ್ಪ ಗೌಡ ಬೊಳ್ಳಾಜೆ,ಸುಳ್ಯ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸ್ಥಾಪಕಾಧ್ಯಕ್ಷ ಅಧ್ಯಕ್ಷ ವಿಶ್ವನಾಥ ರೈ ಅರ್ಗುಡಿ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪಂಜ ವಲಯ ಅಧ್ಯಕ್ಷ ಪ್ರಕಾಶ್ ನರಿಯಂಗ,ಕೇನ್ಯ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ನಿಕಟ ಪೂರ್ವ ಅಧ್ಯಕ್ಷ ವಿಠಲ ರೈ,ಸುಳ್ಯ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕ ಕ್ಯಾಪ್ಟನ್ ಗಣೇಶ್ ರೈ,ಶೌರ್ಯ ವಿಪತ್ತು ನಿರ್ವಹಣಾ ಘಟಕ ಪಂಜ ವಲಯ ಘಟಕ ಪ್ರತಿನಿಧಿ ವಿಶ್ವನಾಥ ಸಂಪ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮೂರು ಒಕ್ಕೂಟಗಳ ಪರವಾಗಿ ನೇಮಿರಾಜ ಪಲ್ಲೋಡಿ ರವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸೇವಾ ಪ್ರತಿನಿಧಿಯಾದ ವೀಣಾ ಸ್ವಾಗತಿಸಿದರು.ವಲಯದ ಮೇಲ್ವಿಚಾರಕರಾದ ಮಮತಾ ವರದಿ ವಾಚಿಸಿದರು ಮತ್ತು ವಂದಿಸಿದರು ಕಾರ್ಯಕ್ರಮದಲ್ಲಿ ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಪಂಜ : ಒಕ್ಕೂಟ ಪದಗ್ರಹಣ ಕಾರ್ಯಕ್ರಮ





































































