ಭಾರೀ ಮಳೆ ಹಿನ್ನಲೆ; ಉಂಬಳೆ ಜಲಪಾತ ವೀಕ್ಷಣೆಗೆ ನಿಷೇಧ ಹೇರಿ ಬ್ಯಾನರ್ ಅಳವಡಿಕೆ

ಚೆಂಬು ಗ್ರಾಮದ ಉಂಬಳೆ ಎಂಬಲ್ಲಿ ಮೀಸಲು ಅರಣ್ಯದೊಳಗಿರುವ ಜಲಪಾತ ವೀಕ್ಷಣೆಗೆ ಅರಣ್ಯ ಇಲಾಖೆ ನಿಷೇಧ ಹೇರಿ ಬ್ಯಾನ‌ರ್ ಅಳವಡಿಸಿದೆ.
ಜಲಪಾತ ವೀಕ್ಷಣೆ ಹಾಗೂ ಮೀಸಲು ಅರಣ್ಯದೊಳಗಡೆ ಅಕ್ರಮ ಪ್ರವೇಶವನ್ನು ಖಡ್ಡಾಯವಾಗಿ ನಿಷೇಧಿಸಲಾಗಿದೆ.
ಪ್ರವಾಸಿಗರು ಜಲಪಾತಗಳಿಗೆ ಭೇಟಿ ನೀಡುವುದನ್ನು ಮತ್ತು ಮೀಸಲು ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಮೀಸಲು ಅರಣ್ಯದೊಳಗಿರುವ ಜಲಪಾತದಲ್ಲಿ ನೀರಿನ ಮಟ್ಟ ಜಾಸ್ತಿಯಾಗಿದ್ದು, ಪ್ರವಾಸಿಗರಿಗೆ ಅಪಾಯದ ಮುನ್ಸೂಚನೆ ಇರುವುದರಿಂದ ಜಲಪಾತಕ್ಕೆ ಹೋಗುವ ಪ್ರವಾಸಿಗರಿಗೆ ನಿಷೇಧ ಮಾಡಲಾಗಿದೆ . ತಪ್ಪಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಸಿಬ್ಬಂದಿಗಳು ತಿಳಿಸಿದ್ದಾರೆ.



















Leave a Comment

Your email address will not be published. Required fields are marked *

error: Content is protected !!
Scroll to Top