ಕ್ಯಾನ್ಸರ್ ಬಗ್ಗೆ ಮುಂಚಿತವಾಗಿ ಅರಿವು ಮೂಡಿಸುವುದೇ ಇದನ್ನು ತಡೆಗಟ್ಟುವ ಏಕೈಕ ಮಾರ್ಗ : ಸಚಿವ ಯು.ಟಿ ಖಾದರ್

ಕ್ಯಾನ್ಸರ್ ಬಗ್ಗೆ ಮುಂಚಿತವಾಗಿ ಅರಿವು ಮೂಡಿಸುವುದೇ ಇದನ್ನು ತಡೆಗಟ್ಟುವ ಏಕೈಕ ಮಾರ್ಗ. ಇಂತಹ ಅಭಿಯಾನಗಳು ಪ್ರತಿ ಮನೆಗೂ ತಲುಪಬೇಕು” ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಅಭಿಪ್ರಾಯಪಟ್ಟರು.
ಕ್ಯಾನ್ಸರ್ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ರೋಟರಿ ಕ್ಲಬ್ ಸುಳ್ಯ ಮತ್ತು ಸುಳ್ಯ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ “ಅರಿವೇ ಜೀವ – ಬದುಕು” ಕ್ಯಾನ್ಸ‌ರ್ ಮಹಾ ಜಾಗೃತಿ ಅಭಿಯಾನಕ್ಕೆ ಆ.06 ರಂದು ಚಾಲನೆ ನೀಡಿ ಮಾತನಾಡಿದರು.
ಕಾರ್ಯಕ್ರಮ ರೋಟರಿ ಸಮುದಾಯ ಸಭಾಂಗಣದಲ್ಲಿ ನಡೆಯಿತು. ಎಲ್ಲಾ ಸಂಘ ಸಂಸ್ಥೆಗಳನ್ನು ಬಳಸಿಕೊಂಡು ಸಾರ್ವಜನಿಕರಿಗೆ ಕ್ಯಾನ್ಸರ್ ಮಾಹಿತಿ ನೀಡಬೇಕಾದ ಅನಿವಾರ್ಯತೆ ಇದೆ. ರೋಟರಿ ಮತ್ತು ಪತ್ರಕರ್ತರ ಈ ಕೆಲಸ ಶ್ಲಾಘನೀಯ ಎಂದು ಸಚಿವ ಯು . ಟಿ ಖಾದರ್ ಹೇಳಿದರು.
ಆರೋಗ್ಯವಂತ ಸಮಾಜ ನಿರ್ಮಾಣ ಅಂದರೆ ಅದು ಈಗಿನ ಮಕ್ಕಳಿಂದ ಮಾತ್ರ ಸಾಧ್ಯ. ಅದಕ್ಕಾಗಿಯೇ ಶಾಲಾ ಆವರಣದಲ್ಲಿ ಜಂಕ್ ಫುಡ್ ಮಾರಾಟ ನಿಷೇಧಿಸಲಾಗಿದೆ. ಆಹಾರವೇ ಔಷಧ. ಮಕ್ಕಳ ತಂದೆ ತಾಯಿ ಮಕ್ಕಳಿಗೆ ಯಾವ ರೀತಿಯ ಆಹಾರ ಅಗತ್ಯ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಯು. ಟಿ ಖಾದ‌ರ್ ಸಲಹೆ ನೀಡಿದರು.
ಶಾಸಕಿ ಭಾಗೀರಥಿ ಮುರುಳ್ಯ, ಸುಳ್ಯ ಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಾಫ, ರಾಜ್ಯ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ಮುಖ್ಯ ಅತಿಥಿಯಾಗಿದ್ದರು. ರೋಟರಿ ಕ್ಲಬ್ ಅಧ್ಯಕ್ಷೆ ಲತಾ ಮಧುಸೂದನ್‌ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರೋಟರಿ ಶಾಲಾ ಸಂಚಾಲಕ ಪ್ರಭಾಕರ ನಾಯ‌ರ್, ರೋಟರಿ ಕ್ಲಬ್ ಸದಸ್ಯ ಮಧುಸೂದನ್ ಕುಂಭಕೋಡು ಇದ್ದರು. ಸುಳ್ಯ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್‌ ಪೆಲ೯ಂಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.



















Leave a Comment

Your email address will not be published. Required fields are marked *

error: Content is protected !!
Scroll to Top