ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಸ್ಥಾಪಕಾಧ್ಯಕ್ಷರಾದ ದಿವಂಗತ ಡಾ ಕುರುಂಜಿ ವೆಂಕಟರಮಣ ಗೌಡರ ೧೩ ನೇ ಪುಣ್ಯಸ್ಮರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಅಧ್ಯಕ್ಷರಾದ ಡಾ ಕೆವಿ ಚಿದಾನಂದ, ಉಪಾಧ್ಯಕ್ಷರಾದ ಶೋಭಾ ಚಿದಾನಂದ,ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ ನೀಲಾಂಬಿಕೈ ನಟರಾಜನ್ ,ಮೆಡಿಕಲ್ ಸೂಪರಿಂಟೆಂಡೆಂಟ್ ಡಾ ಸಿ ಆರ್ ಭಟ್,ಡಾ ಗೋಪಿನಾಥ್ ಪೈ, ಡಾ ಗೀತಾ ದೊಪ್ಪ, ಡಾ ಸತ್ಯವತಿ ಆರ್ ಆಳ್ವ ಸೇರಿದಂತೆ ಗಣ್ಯರು ಕುರುಂಜಿಯವರ ಭಾವಚಿತ್ರಕ್ಕೆ ಪಷ್ಪ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು,ಎಲ್ಲಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ಥಾಪಕಾಧ್ಯಕ್ಷರಾದ ದಿ.ಡಾ ಕುರುಂಜಿ ವೆಂಕಟರಮಣ ಗೌಡರ ಪುಣ್ಯಸ್ಮರಣೆ













