ಫ್ರಿಡ್ಜ್ ಏಕಾಏಕಿ ಭಾರೀ ಸದ್ದಿನೊಂದಿಗೆ ಸ್ಫೋಟಗೊಂಡು ಮನೆಗೆ ಭಾರೀ ಪ್ರಮಾಣದಲ್ಲಿ ಹಾನಿಯಾದ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಆತೂರಿನಲ್ಲಿ ಆ.11ರ ಸಂಜೆ ನಡೆದಿದೆ.
ಈ ಘಟನೆ ನಡೆದಿರುವುದು ಆತೂರಿನ ಸಿದ್ದಿಕ್ ಅವರ ಮನೆಯಲ್ಲಿ.
ಮನೆಯಲ್ಲಿದ್ದ ಫ್ರಿಡ್ಜ್‌ನಲ್ಲಿ ತಾಂತ್ರಿಕ ದೋಷ ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಭಾರೀ ಶಬ್ದದೊಂದಿಗೆ ಸ್ಫೋಟಗೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು, ಮೇಲ್ಛಾವಣಿ ಹಾಗೂ ಪೀಠೋಪಕರಣಗಳಿಗೆ ಹಾನಿಯಾಗಿದೆ. ಸ್ಫೋಟದ ಬೆನ್ನಲ್ಲೇ ಬೆಂಕಿ ಮನೆಯೊಳಗೆ ವ್ಯಾಪಿಸಿದ್ದರಿಂದ ಇತರ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಮನೆಯಲ್ಲಿದ್ದ ಸಾಮಗ್ರಿಗಳು ಸುಟ್ಟುಹೋಗಿವೆ.
ಘಟನೆ ಸಂಭವಿಸಿದ ವೇಳೆ ಮನೆಯಲ್ಲಿ ಸಿದ್ದೀಕ್ ಅವರ ಪತ್ನಿ ಆರೀಫಾ ಅವರು ಮಾತ್ರ ಇದ್ದರು. ಫ್ರಿಡ್ಜ್‌ನಿಂದ ಹೊಗೆ ಹಾಗೂ ಬೆಂಕಿ ಬರುತ್ತಿರುವುದನ್ನು ಗಮನಿಸಿದ ಅವರು ತಕ್ಷಣವೇ ಮನೆಯಿಂದ ಹೊರಗೆ ಬಂದಿದ್ದಾರೆ. ಇದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಸ್ಥಳೀಯರು ಬೆಂಕಿ ನಂದಿಸಲು ನೆರವಾಗಿದ್ದಾರೆ.
ಫ್ರಿಡ್ಜ್ ಏಕಾಏಕಿ ಭಾರೀ ಸದ್ದಿನೊಂದಿಗೆ ಸ್ಫೋಟಗೊಂಡು ಮನೆಗೆ ಭಾರೀ ಪ್ರಮಾಣದಲ್ಲಿ ಹಾನಿ













