ಸುಳ್ಯದ ಹಳೇಗೇಟು ಬಳಿ ಅರಣ್ಯ ಇಲಾಖೆಯ ಬೊಲೆರೋ ಹಾಗೂ ಮಹೀಂದ್ರ ಜೀತೋ ವಾಹನದ ನಡುವೆ ಅಪಘಾತ ಸಂಭವಿಸಿದ ಘಟನೆ ಆ.12ರಂದು ಸಂಜೆ ವರದಿಯಾಗಿದೆ.
ಅರಣ್ಯ ಇಲಾಖೆಯ ಬೊಲೆರೋ ವಾಹನವು ಸುಳ್ಯದಿಂದ ಪೈಚಾರ್ ಕಡೆಗೆ ಹೋಗುತ್ತಿತ್ತು. ಮಹೀಂದ್ರ ಜೀತೋ ವಾಹನವು ಮಡಿಕೇರಿ ಕಡೆಗೆ ಹೋಗುತ್ತಿತ್ತು.
ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ವಾಹನಗಳು ಜಖಂಗೊಂಡಿವೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಅರಣ್ಯ ಇಲಾಖೆಯ ಬೊಲೆರೋ ಹಾಗೂ ಮಹೀಂದ್ರ ಜೀತೋ ವಾಹನದ ನಡುವೆ ಅಪಘಾತ













