ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ವಸತಿ ಶಾಲೆಗಳಲ್ಲಿನ (ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾಗಾಂಧಿ /ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳು) ಉಳಿಕೆ ಮೂಲ ವೃಂದದಲ್ಲಿ ಖಾಲಿಯಿರುವ ವಿವಿಧ ಗ್ರೂಪ್-ಸಿ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ದಿನಾಂಕ 10.07.2026 ರಂದು ಅಧಿಸೂಚನೆ ಹೊರಡಿಸಿ ದಿನಾಂಕ 13.08.2026 ರವರೆಗೆ ಅರ್ಜಿ ಸಲ್ಲಿಸಲು ಹಾಗೂ ದಿನಾಂಕ 14.08.2026 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.
ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲು ಕೋರಿದ್ದರಿಂದ, ಮೇಲ್ಕಂಡ ಸಂಸ್ಥೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ದಿನಾಂಕವನ್ನು ಈ ಕೆಳಗಿನಂತೆ ವಿಸ್ತರಿಸಲಾಗಿದೆ.
1. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
17.08.2026
2. ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ18.08.2026
ಸೂಚನೆ: ಉಳಿದಂತೆ ದಿನಾಂಕ 10.07.2026 ರ ಅಧಿಸೂಚನೆಯಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ.














