ದೇಶ ಅಭಿವೃದ್ಧಿಯತ್ತ ಸಾಗಾಲು ಪ್ರತಿಯೊಬ್ಬರು ಸಹಕಾರ ನೀಡಬೇಕು,ಪ್ರತಿಯೊಬ್ಬರಲ್ಲಿ ದೇಶ ಭಕ್ತಿ ಹೆಚ್ಚಬೇಕು
ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಆ.15 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಮ್ಮ ದೇಶ ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ವಿಶ್ವ ಮಟ್ಟದಲ್ಲಿ ಗುರತಿಸಿಕೊಂಡು ನಾನಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಂಡಿವೆ.
ಹಿರಿಯರ ತ್ಯಾಗದ ಫಲವಾಗಿ ದೇಶಕ್ಕಾಗಿ ನಾವೇನು ಮಾಡಬಹುದು ಎಂಬುದನ್ನು ಪ್ರತಿಯೊಬ್ಬರೂ ಯೋಚನೆ ಮಾಡಬೇಕು,ನಮ್ಮ ಗ್ರಾಮದ ಅಭಿವೃದ್ಧಿಗೆ ನಾವು ನೇತೃತ್ವ ವಹಿಸಿ ಭ್ರಷ್ಟಾಚಾರ ತಡೆಯಬೇಕು ಎಂದು ಅವರು ಹೇಳಿದರು.
ತಹಶೀಲ್ದಾರ್ ಮಂಜುಳ ಎಂ.ರವರು ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರೋತ್ಸವದ ಸಂದೇಶ ನೀಡಿದರು.
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ದ.ಕ.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಸುಳ್ಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಾಫ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್.ಹರಗಿ, ಸರ್ಕಲ್ ಇನ್ ಸ್ಪೆಕ್ಟರ್ ತಿಮ್ಮಪ್ಪ ನಾಯ್, ಎಸ್.ಐ. ಸಂತೋಷ್ ಬಿ.ಪಿ., ನಗರ ಪಂಚಾಯತ್ ಮುಖ್ಯಾಧಿಕಾರಿ ಬಸವರಾಜ್, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮೆಟ್ಟಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ನಿತಿನ್ ಪ್ರಭು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಗುರುಪ್ರಸಾದ್, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್ ಕುಮಾರ್ ಸಿ.ಎಂ. ವೇದಿಕೆಯಲ್ಲಿ.
ಕೃಷಿಕರಾದ ಡಿ.ಎಸ್.ಚಂದ್ರಶೇಖರ ಸುಬ್ಬಯ್ಯಮೂಲೆ, ನಿವೃತ್ತ ಸೈನಿಕರಾದ ತಿರುಮಲೇಶ್ವರ ಸಣ್ಣಮನೆ ಮತ್ತು ದಯಾನಂದ ಪಿ.ಕೆ. ಅವರನ್ನು ಸನ್ಮಾನಿಸಲಾಯಿತು. ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಸ್ವಾಗತಿಸಿ,ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್.ಹರಗಿ ವಂದಿಸಿದರು. ಮಮತಾ ಎಸ್.ಕೆ. ಮತ್ತು ಧನಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು. ಸ್ವಾತಂತ್ರೋತ್ಸವ ಪ್ರಯುಕ್ತ ಆಕರ್ಷಕ ಪಥ ಸಂಚಲನ ನಡೆಯಿತು.
















