ಪುತ್ತೂರು: ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು

ಪುತ್ತೂರು: ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 64 ಗ್ರಾಂ ಗಾಂಜಾ ಹಾಗೂ ಮೊಬೈಲ್‌ವೊಂದನ್ನು ವಶಪಡಿಸಿಕೊಂಡು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಮಾನ್ಯ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಇವರ ನಿರ್ದೇಶನದಂತೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ, ಆಗಸ್ಟ್ 18ರಂದು ರಾತ್ರಿ ಸುಮಾರು 11.30ಕ್ಕೆ ಪುತ್ತೂರು ವಲಯದ ಅಬಕಾರಿ ನಿರೀಕ್ಷಕ ಲೋಕೇಶ್ ಸಿ. ಅವರ ನೇತೃತ್ವದಲ್ಲಿ ಸಿಬ್ಬಂದಿ ರಾಷ್ಟ್ರೀಯ ಹೆದ್ದಾರಿ 75ರ ಪಡುಪು ವಳಲು ಎಂಬಲ್ಲಿ ತಪಾಸಣೆ ನಡೆಸಿದರು.
ಈ ವೇಳೆ ಬೆಳ್ತಂಗಡಿ ತಾಲೂಕಿನ ಕಡವಿನಬಾಗಿಲು ಗ್ರಾಮದ ಮೊಹಮ್ಮದ್ ಜಿಯಾದ್ ಬಿನ್ ಅಬ್ದುಲ್ ಕುನ್ನಿ ಎಂಬಾತನಿಂದ 64 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್‌ನ್ನು ವಶಪಡಿಸಿಕೊಳ್ಳಲಾಯಿತು. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು ₹17,000 ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಅಬಕಾರಿ ಪೇದೆ ಎಲ್ಲಪ್ಪ ಹಾಗೂ ವಾಹನ ಚಾಲಕ ಶರತ್ ಕುಮಾರ್ ಭಾಗವಹಿಸಿದ್ದರು. ಆರೋಪಿಯನ್ನು ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಿ ಪ್ರಕರಣ ದಾಖಲಿಸಲಾಗಿದ್ದು, ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

























Leave a Comment

Your email address will not be published. Required fields are marked *

error: Content is protected !!
Scroll to Top