ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ನೂತನ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಕೆ.ಎಚ್ ಮುನಿಯಪ್ಪ ಅವರನ್ನು ಭೇಟಿಯಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಗ್ರಾಮೀಣ ರಸ್ತೆಗಳಿಗೆ 10ಕೋಟಿ ರೂ ವಿಶೇಷ ಅನುದಾನವನ್ನು ಒದಗಿಸುವಂತೆ ಮನವಿ ಸಲ್ಲಿಸಿದರು .
ಸುಳ್ಯ ಅಂಬೇಡ್ಕರ್ ಭವನದ ಅಂದಾಜು ಪಟ್ಟಿಯು ಸರಕಾರಕ್ಕೆ ಸಲ್ಲಿಕೆಯಾಗಿ 2ತಿಂಗಳಾಗಿದ್ದು ಇನ್ನು ಅನುಮೊದನೆಯಾಗಿಲ್ಲ ಅದನ್ನು ಶೀಘ್ರವೇ ಅದನ್ನು ಅನುಮೊದನೆಗೊಳಿಸಿ ಅಂಬೇಡ್ಕರ್ ಭವನದ ಕಾಮಗಾರಿ ನಡೆಸಲು ಅನುಕೂಲ ಮಾಡಿಕೊಡುವಂತೆ ಸಚಿವರಿಗೆ ತಿಳಿಸಿದರು, ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ವಂದಿಸಿದ ಸಚಿವರು ಅಧಿವೇಶನ ಮುಗಿದ ಬಳಿಕ ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
















