ಸುಬ್ರಹ್ಮಣ್ಯ:- ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ(ರಿ) ಸುಳ್ಯ ತಾಲೂಕು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ನಂದಾರವರ ಅಧ್ಯಕ್ಷತೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಆ.24ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮವನ್ನು ಸುಳ್ಯ ತಾಲೂಕಿನ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ವಿಮಲಾ ರಂಗಯ್ಯರವರು ಉದ್ಘಾಟಿಸಿದರು.
ಅವರು ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಯಾರು ಕೂಡ ದುಶ್ಚಟಕ್ಕೆ ಬಲಿಯಾಗದೆ ಪ್ರತಿಯೊಬ್ಬರು ಮುಂದಿನ ಜೀವನದಲ್ಲಿ ದೇಶದ ಉತ್ತಮ ಪ್ರಜೆಯಾಗಿ ಬಾಳಬೇಕೆಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯವರಾದ ಸುಳ್ಯದ ನ್ಯಾಯಾವಾದಿ ಬಾನುಪ್ರಕಾಶ್ ಪೆರ್ಮುoಡರವರು ಮಾತನಾಡುತ್ತ, ವಿದ್ಯಾರ್ಥಿ ಜೀವನದಲ್ಲಿ ಹದಿಹರೆಯ ವಯಸ್ಸಿನಲ್ಲಿ ಬೀಡಿ, ಸಿಗರೇಟ್, ತಂಬಾಕು, ಗಾಂಜಾ, ಮದ್ಯ ಸೇವನೆ, ಗುಡ್ಕ ಇಂತಹ ಮಾದಕ ವಸ್ತುಗಳ ಸೇವನೆಗಳಿಗೆ ಬಲಿಯಾಗುತ್ತಿದ್ದಾರೆ. ಇಂತಹ ದುಶ್ಚಟಗಳಿಂದ ವಿದ್ಯಾರ್ಥಿಗಳ ಜೀವನ ಹಾಳಾಗುತ್ತಿದೆ. ಅದಲ್ಲದೆ ಅರೋಗ್ಯದಲ್ಲಿ ದುಷ್ಪರಿಣಾಮಗಳು ಉಂಟಾಗುತ್ತದೆ. ಇವುಗಳು ಮಾತ್ರ ವಲ್ಲದೆ ಮೊಬೈಲ್ ಬಳಕೆ ಕೂಡ ಜೀವನದಲ್ಲಿ ದೊಡ್ಡ ದುಷ್ಪರಿಣಾಮಗಳನ್ನು ಎದುರಿಸುತ್ತಿರುವುದು ನಾವು ಆನೇಕ ಉದಾಹರಣೆಗಳನ್ನು ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ. ಇಂತಹ ದುಶ್ಚಟಗಳಿಂದ ವಿದ್ಯಾರ್ಥಿಗಳಾದ ನಾವು ದೂರ ಇರಬೇಕು. ವಿದ್ಯಾರ್ಥಿ ಜೀವನದಲ್ಲಿ ನಾವು ಉತ್ತಮವಾದ ಶಿಕ್ಷಣವನ್ನು ಪಡೆದು ಮುಂದಿನ ಜೇವನದಲ್ಲಿ ಒಬ್ಬ ಆದರ್ಶ ಪ್ರಜೆಯಾಗಿ ಬಾಳಬೇಕು. ದೇಶದಲ್ಲಿ ಸ್ವಾಸ್ತ್ಯ ಸಮಾಜವನ್ನು ನಾವೆಲ್ಲ ಸೇರಿ ನಿರ್ಮಾಣ ಮಾಡಬೇಕೆಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ಸತೀಶ್ ಟಿ ಎನ್ ಪ್ರಾಸ್ತವಿಕವಾಗಿ ಮಾತನಾಡಿದರು. ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಗಿರಿಧರ ಸ್ಕಂದರವರು ಶುಭಕೋರಿದರು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ರತ್ನಾವತಿರವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿಯವರಾದ ಶೈಲಜಾರವರು ಸ್ವಾಗತಿಸಿದರು. ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಕೆ ರವರು ಕಾರ್ಯನಿರೂಪಿಸಿದರು. ಪ್ರೌಢ ಶಾಲಾ ಗಣಿತ ಶಿಕ್ಷಕರಾದ ಕೃಷ್ಣ ಭಟ್ ರವರು ಧನ್ಯವಾದವಿತ್ತರು.





























Leave a Comment

Your email address will not be published. Required fields are marked *

error: Content is protected !!
Scroll to Top