ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರನ್ನು ಭೇಟಿಯಾಗಿ ಕ್ಷೇತ್ರದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ ಸುಳ್ಯ ಶಾಸಕರು

ಸುಳ್ಯ ವಿಧಾನ ಸಭಾ ಕ್ಷೇತ್ರದ ಕುಕ್ಕೆ ಸುಬ್ರಹ್ಮಣ್ಯ ಆರೋಗ್ಯಕೇಂದ್ರ ಮತ್ತು ಬೆಳ್ಳಾರೆ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಿ 24×7ಸೇವೆಯನ್ನು ಕಲ್ಪಿಸುವಂತೆ ಸುಳ್ಯ ಶಾಸಕರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್ ಅವರಿಗೆ ತಿಂಗಳ ಹಿಂದೆ ಮನವಿ ಸಲ್ಲಿಸಿದ್ದರು ಮನವಿಯನ್ನು ಪರಿಗಣಿಸಿದ ಸಚಿವರು ಈ ಎರಡು ಆಸ್ಪತ್ರೆಗಳಲ್ಲಿ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಅರೋಗ್ಯ ಇಲಾಖೆಯ ಆಯುಕ್ತರಿಗೆ ಪತ್ರದ ಮೂಲಕ ಸೂಚಿಸಿದ್ದರು. ಆ ಪ್ರಯುಕ್ತ ಇಂದು ಅರೋಗ್ಯ ಇಲಾಖೆಯ ಆಯುಕ್ತರಾದ ಗುರುದತ್ತ ಹೆಗ್ಗಡೆ ಅವರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಿದರು.ಈ ಸಂದರ್ಭದಲ್ಲಿ ಸುಳ್ಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತನಿಧಿ ಕೇಂದ್ರ ಸ್ಥಾಪನೆ ಮತ್ತು ಕಡಬ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರ ಸ್ಥಾಪನೆಗೆ ನೂತನ ಕಟ್ಟಡ ನಿರ್ಮಾಣದ ವಿಚಾರಗಳನ್ನು ಮಾನ್ಯ ಸಚಿವರಿಗೆ ಮನವಿ ಸಲ್ಲಿಸಿದ್ದು ಆ ಬೇಡಿಕೆಗಳನ್ನು ಕೂಡ ಶೀಘ್ರವಾಗಿ ಕ್ರಮಕೈಗೊಳ್ಳುವಂತೆ ಸೂಚಿಸಿದರು.





























Leave a Comment

Your email address will not be published. Required fields are marked *

error: Content is protected !!
Scroll to Top