ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘದಿಂದ ನೂತನ ಸಬ್ ಇನ್ಸ್‌ಪೆಕ್ಟರ್‌ಗೆ ಸ್ವಾಗತ

ಸುಳ್ಯ: ಸುಳ್ಯ ಪೊಲೀಸ್ ಠಾಣೆಗೆ ನೂತನವಾಗಿ ಆಗಮಿಸಿದ ಸಬ್ ಇನ್ಸ್‌ಪೆಕ್ಟರ್ ಉದಯ ರವಿ ಅವರನ್ನು ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ.) ಬಿಎಂಎಸ್ ಸಂಯೋಜಿತ ಸಂಘದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

































ಸಂಘದ ಅಧ್ಯಕ್ಷ ಪ್ರಕಾಶ್ ಎಂ.ಎಸ್. ಅವರು ಸಬ್ ಇನ್ಸ್‌ಪೆಕ್ಟರ್ ಉದಯ ರವಿ ಅವರಿಗೆ ಹೂಗುಚ್ಛ ನೀಡಿ ಶುಭಾಶಯಗಳನ್ನು ಕೋರಿದರು. ಬಳಿಕ ಸಹೋದರತೆಯ ಸಂಕೇತವಾದ ರಕ್ಷಾ ಬಂಧನವನ್ನು ಕಟ್ಟಿ, ಸಹೋದರತೆಯ ಬಾಂಧವ್ಯವನ್ನು ಸಾರಿದರು.

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಾರಾಯಣ ಎಸ್.ಎಂ., ಕೋಶಾಧಿಕಾರಿ ರವಿ ಎಸ್., ಕಾನೂನು ಸಲಹೆಗಾರ ಭಾಸ್ಕರ್ ರಾವ್, ಸಂಘಟನಾ ಕಾರ್ಯದರ್ಶಿ ಸುಂದರ್ ಪೆರಾಜೆ, ಜಂಟಿ ಕಾರ್ಯದರ್ಶಿ ಸುರೇಂದ್ರ ಕಾಮತ್, ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ನಿರ್ದೇಶಕರಾದ ಭಾನು ಪ್ರಕಾಶ್, ಹರೀಶ್ ನೆಕ್ರಾಜೆ, ಪ್ರಸನ್ನ ರಥಬೀದಿ, ಲೋಕೇಶ್ ಬಸ್ ನಿಲ್ದಾಣ ಹಾಗೂ ಚಾಮಯ್ಯ ಮಾರ್ಕೆಟ್ ರಸ್ತೆ ಉಪಸ್ಥಿತರಿದ್ದರು

Leave a Comment

Your email address will not be published. Required fields are marked *

error: Content is protected !!
Scroll to Top