ರಾಜ್ಯ ಸರ್ಕಾರವು ನಿವೃತ್ತ ಸರ್ಕಾರಿ ನೌಕರರು ಹಾಗೂ ಕುಟುಂಬ ಪಿಂಚಣಿದಾರರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿ, ‘ಸಂಧ್ಯಾ ಕಿರಣ’ ನಗದುರಹಿತ ಆರೋಗ್ಯ ಯೋಜನೆಯನ್ನು ಅಧಿಕೃತವಾಗಿ ಜಾರಿಗೊಳಿಸಿ ಆದೇಶ ಹೊರಡಿಸಿದೆ. 7ನೇ ವೇತನ ಆಯೋಗದ ಶಿಫಾರಸು ಮತ್ತು ನಿವೃತ್ತ ನೌಕರರ ಸಂಘದ ಮನವಿಯಂತೆ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮೂಲಕ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ (AB-ArK) ಮಾದರಿಯಲ್ಲಿ ಈ ಯೋಜನೆ ಜಾರಿಯಾಗಲಿದೆ. 70 ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಲ್ಲಾ ರಾಜ್ಯ ಸರ್ಕಾರಿ ನಿಯಮಿತ ಪಿಂಚಣಿದಾರರು, ಅವರ ಪತಿ/ಪತ್ನಿ ಮತ್ತು ಅವಲಂಬಿತ ದಿವ್ಯಾಂಗ ಮಕ್ಕಳು ಇದರ ಫಲಾನುಭವಿಗಳಾಗಲಿದ್ದು, ವಾರ್ಷಿಕ ಗರಿಷ್ಠ 5 ಲಕ್ಷ ರೂ.ಗಳವರೆಗೆ ನಗದುರಹಿತ ಆರೋಗ್ಯ ಸೇವೆ ಲಭ್ಯವಾಗಲಿದೆ.
ನಿವೃತ್ತ ಸರ್ಕಾರಿ ನೌಕರರಿಗೆ ‘ಸಂಧ್ಯಾ ಕಿರಣ’ ನಗದುರಹಿತ ಆರೋಗ್ಯ ಯೋಜನೆ ಜಾರಿ




















